ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸುವರ್ಣ ಅವಕಾಶ. ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರದ ಜಂಟಿ ಸಹಭಾಗಿತ್ವದ ಸಂಸ್ಥೆಯಾದ ನಮ್ಮ ಮೆಟ್ರೋ, ನಿಯೋಜನೆ ಅಥವಾ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅಧಿಕೃತ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿದೆ.
ಯಾವ ಹುದ್ದೆಗೆ ನೇಮಕಾತಿ?
ಮೆಟ್ರೋ ರೈಲು ನಿಗಮದ ಯೋಜನಾ ವಿಭಾಗದಲ್ಲಿ ಉಪ ಪ್ರಧಾನ ವ್ಯವಸ್ಥಾಪಕರು (Operation Safety – Deputy General Manager) ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಈ ವಿಭಾಗದಲ್ಲಿ 01 ಹುದ್ದೆ ಖಾಲಿ ಇದ್ದು, ಪ್ರಸ್ತುತ ಸೇವೆ ಸಲ್ಲಿಸುತ್ತಿರುವ ಅಥವಾ ನಿವೃತ್ತರಾಗಿರುವ ಅರ್ಹ ಹಾಗೂ ಅನುಭವ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು ಮತ್ತು ಸಮಯ:
ಅಭ್ಯರ್ಥಿಗಳು ಆನ್ಲೈನ್ ಮತ್ತು ಆಫ್ಲೈನ್ ಎರಡೂ ವಿಧಾನಗಳ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 10
ಭೌತಿಕ ಅರ್ಜಿ (Hard Copy) ತಲುಪಿಸಲು ಕೊನೆಯ ದಿನಾಂಕ: ಆಗಸ್ಟ್ 13 (ಸಂಜೆ 4:00 ಗಂಟೆಯೊಳಗೆ)
ಅರ್ಜಿ ಸಲ್ಲಿಕೆ ಹೇಗೆ?
ಅರ್ಹ ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್ ಸೈಟ್ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ತದನಂತರ ಆನ್ಲೈನ್ ಅರ್ಜಿಯನ್ನು ಡೌನ್ಲೋಡ್ ಮಾಡಿ, ಅದಕ್ಕೆ ಸಹಿ ಮಾಡಿ, ಅಗತ್ಯವಿರುವ ಎಲ್ಲಾ ಪೂರಕ ದಾಖಲೆಗಳೊಂದಿಗೆ (Documents) ಬಿಎಂಆರ್ಸಿಎಲ್ ಕಚೇರಿಗೆ ನಿಗದಿತ ಸಮಯದೊಳಗೆ ತಲುಪಿಸಬೇಕಾಗುತ್ತದೆ.
ಗಮನಿಸಿ: ಈ ಹುದ್ದೆಗೆ ಬೇಕಾಗುವ ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ ಮತ್ತು ಅರ್ಜಿ ಪ್ರಕ್ರಿಯೆಯ ಸಂಪೂರ್ಣ ವಿವರಗಳಿಗಾಗಿ ಅಭ್ಯರ್ಥಿಗಳು ಬಿಎಂಆರ್ ಸಿಎಲ್ ನ ಅಧಿಕೃತ ವೆಬ್ಸೈಟ್ ಆದ www.bmrc.co.in ನ ‘Career Section’ ಗೆ ಭೇಟಿ ನೀಡಬಹುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


