ತುಮಕೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಖಾಲಿ ಇರುವ ಜಿಲ್ಲಾ ಯೋಜನಾ ಸಂಯೋಜಕರ ಹುದ್ದೆಯನ್ನು ನೇರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಸ್ಥಳೀಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಯನ್ನು ಸೇವಾನುಭವದ ಆಧಾರದಲ್ಲಿ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕ ಮಾಡಿಕೊಳ್ಳಲಾಗುವುದು. ಆಯ್ಕೆಯಾದವರಿಗೆ ಮಾಸಿಕ 30,000 ರೂ.ಗಳ ಗೌರವಧನ ನೀಡಲಾಗುವುದು.
ಭರ್ತಿ ಮಾಡಿದ ಅರ್ಜಿಯನ್ನು ಫೆಬ್ರವರಿ 18ರೊಳಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು ಇವರಿಗೆ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವವರು ಕಂಪ್ಯೂಟರ್ ಸೈನ್ಸ್/ ಇನ್ಫಾರ್ಮೇಶನ್ ಟೆಕ್ನಾಲಜಿ ವಿಷಯದಲ್ಲಿ ಪದವಿ/ ಸ್ನಾತಕ ಪದವಿ, ಅಪ್ಲಿಕೇಶನ್ ನಿರ್ವಹಣೆ ಕನಿಷ್ಟ 2 ವರ್ಷಗಳ ಸೇವಾನುಭವ, ಸ್ಥಳೀಯ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಉತ್ತಮ ಮೌಖಿಕ ಮತ್ತು ಲಿಖಿತ ಸಂವಹನ ಕೌಶಲ್ಯ ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ.0816–2956624ನ್ನು ಸಂಪರ್ಕಿಸಬೇಕೆಂದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4