ತುಮಕೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ವಸತಿ ನಿಲಯದ ಪ್ರತಿಭಾವಂತ ಕ್ರೀಡಾಪಟುಗಳಿಗೆ ವೈಜ್ಞಾನಿಕವಾಗಿ ಫಿಟ್ನೆಸ್ ತರಬೇತಿ ನೀಡಲು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ತರಬೇತುದಾರರಿಂದ ಅರ್ಜಿ ಆಹ್ವಾನಿಸಿದೆ.
ಹುದ್ದೆಯು ಒಂದು ವರ್ಷದ ಅವಧಿಯದ್ದಾಗಿದ್ದು, ತಾತ್ಕಾಲಿಕವಾಗಿದೆ. ಆಯ್ಕೆಯಾದವರಿಗೆ ಮಾಸಿಕ ಸಂಚಿತ ವೇತನ ನೀಡಲಾಗುವುದು.ನಿಗದಿತ ಅರ್ಜಿ ನಮೂನೆಯನ್ನು ಇಲಾಖೆಯ ವೆಬ್ ಸೈಟ್ dyes.karnataka.gov.in ನಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಏಪ್ರಿಲ್ 15ರೊಳಗಾಗಿ ಮಹಾನಿರ್ದೇಶಕರು, ಕರ್ನಾಟಕ ಕ್ರೀಡಾ ಪ್ರಾಧಿಕಾರ, ರಾಜ್ಯ ಯುವಕೇಂದ್ರ, ನೃಪತುಂಗರಸ್ತೆ, ಬೆಂಗಳೂರು–560001 ಇವರಿಗೆ ಸಲ್ಲಿಸಬೇಕು. ಅರ್ಜಿ ಲಕೋಟೆಯ ಮೇಲೆ “ಮಾಸಿಕ ಸಂಚಿತ ವೇತನ, ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಯವರೆಗೆ ಫಿಟ್ನೆಸ್ ತರಬೇತುದಾರರ ಹುದ್ದೆಯ ನೇಮಕಾತಿಗಾಗಿ ಅರ್ಜಿಯನ್ನು ಸಲ್ಲಿಸಲಾಗುತ್ತಿದೆ” ಎಂಬ ಮೇಲು ಬರಹದೊಂದಿಗೆ ಮೊಹರಾದ ಲಕೋಟೆಯಲ್ಲಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮಗಾಂಧಿ ಕ್ರೀಡಾಂಗಣ, ತುಮಕೂರು ಅಥವಾ ಮೊ.ಸಂ. 9741691379ನ್ನು ಸಂಪರ್ಕಿಸಬಹುದೆAದು ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4