ತುಮಕೂರು: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ(ವಿಆರ್ ಡಬ್ಲ್ಯೂ)ರ ತಾತ್ಕಾಲಿಕ ಹುದ್ದೆಗಳನ್ನು ಗೌರವಧನ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳು ಗುಬ್ಬಿ ತಾಲ್ಲೂಕಿನ ಎಸ್.ಕೊಡಗೀಹಳ್ಳಿ ಹಾಗೂ ಚಂಗಾವಿ ಗ್ರಾಮ ಪಂಚಾಯತಿ; ಕುಣಿಗಲ್ ತಾಲ್ಲೂಕಿನ ಕಗ್ಗೆರೆ; ಪಾವಗಡ ತಾಲ್ಲೂಕಿನ ಪಳವಳ್ಳಿ ಹಾಗೂ ಕನ್ನಮೇಡಿ; ತಿಪಟೂರು ತಾಲ್ಲೂಕಿನ ಮಣಕಿಕೆರೆ ಗ್ರಾಮ ಪಂಚಾಯತಿಗಳಲ್ಲಿ ಖಾಲಿಯಿದ್ದು, ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಜೂನ್ 23ರೊಳಗಾಗಿ ಸಂಬಂಧಿಸಿದ ತಾಲ್ಲೂಕು ಪಂಚಾಯತಿಗಳಿಗೆ ಸಲ್ಲಿಸಬಹುದಾಗಿದೆ.
ಆಯ್ಕೆಯಾದವರಿಗೆ ಮಾಹೆಯಾನ 10,000 ರೂ.ಗಳ ಗೌರವಧನ ನೀಡಲಾಗುವುದು. ವಿಆರ್ ಡಬ್ಲ್ಯೂ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿದ್ದು, ಶೇ.40 ಮೇಲ್ಪಟ್ಟು ಭಾಗಶಃ ವಿಕಲತೆ ಹೊಂದಿ(ತೀವ್ರತರರಲ್ಲದ)ರುವ 18 ರಿಂದ 45ವರ್ಷ ವಯೋಮಿತಿಯೊಳಗಿನವರಾಗಿರಬೇಕು ಹಾಗೂ ಹುದ್ದೆ ಖಾಲಿಯಿರುವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿಯೇ ವಾಸವಿರಬೇಕು. ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ(ಯುಡಿಐಡಿ) ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 0816–2252763ನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಅಧಿಕಾರಿ ಬಿ.ಎಸ್.ಚಿದಾನಂದ ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW