ಬೀದರ್: ರಾಜ್ಯೋತ್ಸವ ಪ್ರಯುಕ್ತ ನೀಡಲಾಗುವ ರಾಜ್ಯ ಮಟ್ಟದ ಕನ್ನಡ ಸೇವಾ ರತ್ನ ಪ್ರಶಸ್ತಿಗೆ ಶ್ರೀ ಕೇತಕಿ ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ಹಾಗೂ ಹಣ್ಮು ಪಾಜಿ ಗೆಳೆಯರ ಬಳಗದಿಂದ ಅರ್ಜಿ ಆಹ್ವಾನಿಸಲಾಗಿದೆ.
71 ನೇ ರಾಜ್ಯೋತ್ಸವದ ಅಂಗವಾಗಿ ಈ ಬಾರಿ ಸಾಮಾಜಿಕ, ಶೈಕ್ಷಣಿಕ, ಕಲೆ, ಸಾಹಿತ್ಯ, ಪತ್ರಿಕಾರಂಗ, ನ್ಯಾಯಾಂಗ, ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಎಲೆಮಾರಿ ಕಾಯಿ 71 ಸಾಧಕರಿಗೆ ಪ್ರಶಸ್ತಿ ನೀಡಲಾಗುವುದು ಎಂದು ಕೇತಕಿ ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಹಣ್ಮು ಪಾಜಿ ತಿಳಿಸಿದ್ದಾರೆ.
ರಾಜ್ಯದ ಎಲ್ಲಾ ಜಿಲ್ಲೆಗಳ ಆಸಕ್ತರು ಎರಡು ಪುಟಗಳ ಸಾಧನೆಯ ಮಾಹಿತಿ ಹಾಗೂ ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಅಧ್ಯಕ್ಷರು, ಶ್ರೀ ಕೇತಕಿ ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಸ್ಥೆ, ಅಲ್ಲಮಪ್ರಭು ನಗರ, ಗುಂಪಾ, ಬೀದರ್ ಈ ವಿಳಾಸಕ್ಕೆ ಖುದ್ದಾಗಿ ಅಥವಾ ಇ-ಮೇಲ್ ವಿಳಾಸ hanmupaaji55@gmail.com ವಾಟ್ಸಪ್ ಸಂಖ್ಯೆ 8073122039 (ಪರಮೇಶ ವಿಳಾಸಪುರೆ), 9449031557 (ಹಣ್ಮು ಪಾಜಿ) ಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16–11–2026
ವರದಿ: ಅರವಿಂದ ಮಲ್ಲೀಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
