ತುಮಕೂರು: ಕುಣಿಗಲ್ ಪುರಸಭಾ ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರಿಗಾಗಿ ವಿವಿಧ ಯೋಜನೆಗಳಡಿ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ.
2026–27ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣ ಯೋಜನೆ(ಶೇ 24.10), ಇತರೆ ಬಡ ಜನರ ಕಲ್ಯಾಣ ಯೋಜನೆ(ಶೇ.7.25) ಹಾಗೂ ವಿಕಲಚೇತನ(ಶೇ.5)ಯಡಿ ವ್ಯಕ್ತಿ ಸಂಬಂಧಿತ ಕಾರ್ಯಕ್ರಮಗಳಾದ ಕುಣಿಗಲ್ ಪಟ್ಟಣ ವ್ಯಾಪ್ತಿಯಲ್ಲಿ ಬರುವ ವಿಕಲಚೇತನ ರೋಗಿಗಳಿಗೆ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆಗೆ ಧನ ಸಹಾಯ, ವಿವಿಧ ಹಂತದಲ್ಲಿ ವ್ಯಾಸಂಗ ಮಾಡುತ್ತಿರುವ ಇತರೆ ಬಡಜನರ ವಿದ್ಯಾರ್ಥಿಗಳಿಗೆ ಸಹಾಯಧನದ ನೆರವು, ಸಮುದಾಯ ಸಂಬಂಧಿಸಿದ ಕಾರ್ಯಕ್ರಮಗಳಾದ ಕುಣಿಗಲ್ ಪಟ್ಟಣ ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆಯಡಿ ಬರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಎಸ್ಸಿ/ಎಸ್ಟಿ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳಿಗೆ Spoken English (Personality Development) ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಮೇ 30ರೊಳಗಾಗಿ ಪುರಸಭಾ ಕಾರ್ಯಾಲಯಕ್ಕೆ ಸಲ್ಲಿಸಬೇಕು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


