ತುಮಕೂರು : 2026–2027 ಸಾಲಿನ ಎಸ್ ಎಫ್ ಸಿ ಮುಕ್ತನಿಧಿ ಅನುದಾನದಲ್ಲಿ ಹಾಗೂ ನಗರಸಭಾ ನಿಧಿಯಲ್ಲಿ ಶೇ24.1, 7.25 ಹಾಗೂ ಶೇ.5ರ ಅನುದಾನದಡಿ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿದ್ದು, ಸಿರಾನಗರಸಭಾ ವ್ಯಾಪ್ತಿಯಲ್ಲಿ ಬರುವ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಗಳಡಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಇತರೆ ಬಡ ಜನಾಂಗದ ಫಲಾನುಭವಿಗಳಿಗೆ ಹೊಲಿಗೆ ಯಂತ್ರ, ಬೀದಿ ಬೀದಿ ವ್ಯಾಪಾರಿಗಳಿಗೆ ತಳ್ಳುವ ಗಾಡಿ ಹಾಗೂ ಬೀದಿ ಬೀದಿ ವ್ಯಾಪಾರಿಗಳಿಗೆ ಬಿಸಿಲಿನಿಂದ ರಕ್ಷಣೆಗಾಗಿ ಛತ್ರಿ ನೀಡಲಾಗುವುದು.
ಆಸಕ್ತ ಫಲಾನುಭವಿಗಳು ನಿಗದಿತ ಅರ್ಜಿಯನ್ನು ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಜೂನ್ 18ರೊಳಗಾಗಿ ಪೌರಾಯುಕ್ತರು, ನಗರಸಭೆ, ಶಿರಾ ಇವರಿಗೆ ತಲುಪುವಂತೆ ಸಲ್ಲಿಸಬೇಕು. ಅವಧಿ ಮೀರಿ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಹೆಚ್ಚಿನ ಮಾಹಿತಿಯನ್ನು ನಗರಸಭೆ ಶಿರಾ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


