ತುಮಕೂರು: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮವು ಬ್ಯಾಂಕಿನ ಸಹಯೋಗದೊಂದಿಗೆ ವಿವಿಧ ಯೋಜನೆಗಳಡಿ ಸಾಲ/ಸಹಾಯಧನ ಸೌಲಭ್ಯ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಕುರಿ ಸಾಕಾಣಿಕೆಗಾಗಿ 50,000 ರೂ.ಗಳ ಸಹಾಯಧನ ಹಾಗೂ 50,000 ರೂ.ಗಳ ಸಾಲ ಸೇರಿದಂತೆ ಘಟಕ ವೆಚ್ಚ 1 ಲಕ್ಷ ರೂ.ಗಳ ಸಾಲ ಸೌಲಭ್ಯ ನೀಡಲಾಗುವುದು. ಅದೇ ರೀತಿ ಸ್ವಾವಲಂಬಿ ಸಾರಥಿ ಯೋಜನೆಯಡಿ ಫುಡ್ ಕಾರ್ಟ್ ಸ್ಥಾಪನೆಗಾಗಿ ಸಾಲದ ಮೊತ್ತಕ್ಕೆ ಶೇ.75ರಷ್ಟು ಅಥವಾ 4 ಲಕ್ಷ ರೂ.ಗಳವರೆಗೆ ಸಹಾಯಧನ ಹಾಗೂ ಉಳಿದ ಮೊತ್ತವನ್ನು ಬ್ಯಾಂಕ್ ಮೂಲಕ ಸಾಲ ಸೌಲಭ್ಯ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 29ರೊಳಗಾಗಿ ವೆಬ್ ಸೈಟ್ https://sevasindhu.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx