ತುಮಕೂರು: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಕಲ್ಪಿಸಲು ಅರ್ಹ ಮಡಿವಾಳ ಸಮುದಾಯದವರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ, ಗಂಗಾಕಲ್ಯಾಣ ನೀರಾವರಿ, ಅರಿವು-ಶೈಕ್ಷಣಿಕ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ, ಸ್ವಾವಲಂಬಿ ಸಾರಥಿ ಹಾಗೂ ಸ್ವಯಂ ಉದ್ಯೋಗ ಸಾಲ(ವಾಣಿಜ್ಯ ಬ್ಯಾಂಕ್ಗಳ ಸಹಯೋಗದೊಂದಿಗೆ) ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಸಾಲ ಸೌಲಭ್ಯ ಪಡೆಯಲಿಚ್ಛಿಸುವವರು ತಮ್ಮ ಅರ್ಜಿಯನ್ನು ಆಗಸ್ಟ್ 31ರೊಳಗಾಗಿ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಗ್ರಾಮ ಒನ್/ಕರ್ನಾಟಕ ಒನ್, ತುಮಕೂರು ಒನ್ ಸೇವಾ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://kmmd.karnataka.gov.in ಅಥವಾ ನಿಗಮದ ಕೇಂದ್ರ ಕಚೇರಿ ದೂ.ವಾ.ಸಂ. 080-22374832, 8050770004, 8050770005 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂ.ವಾ.ಸಂಖ್ಯೆ 0816-2005008ನ್ನು ಸಂಪರ್ಕಿಸಬೇಕೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q