ತುಮಕೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕಲೆ, ಸಂಸ್ಕೃತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರಿಗೆ ಪ್ರತಿ ತಿಂಗಳು 2,000 ರೂ.ಗಳ ಮಾಸಾಶನ ನೀಡಲು ಅರ್ಜಿ ಆಹ್ವಾನಿಸಿದೆ.
ಈ ಯೋಜನೆಗೆ ವರ್ಷ ಪೂರ್ತಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿದಾರರಿಗೆ 58 ವರ್ಷ ಪೂರ್ಣಗೊಂಡಿರಬೇಕು ಹಾಗೂ 25 ವರ್ಷಗಳ ಕಾಲ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಬಗ್ಗೆ ಸೂಕ್ತ ಮಾಹಿತಿ ಒದಗಿಸಬೇಕು. ಅರ್ಜಿದಾರರು ಸರ್ಕಾರದ ಇತರೆ ಯಾವುದೇ ಯೋಜನೆಗಳಡಿ ಮಾಸಾಶನ ಫಲಾನುಭವಿಗಳಾಗಿರಬಾರದು. ವಾರ್ಷಿಕ ಆದಾಯ 1ಲಕ್ಷ ರೂ. ಮಿತಿಯಲ್ಲಿರಬೇಕು.
ಎಲ್ಲಾ ಸಮುದಾಯ, ಎಲ್ಲಾ ಕಲಾಪ್ರಕಾರ ಹಾಗೂ ವಿವಿಧ ಅಲೆಮಾರಿ ಸಮುದಾಯದ ಕಲಾವಿದರೂ ಸಹ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಈ ಬಗ್ಗೆ ಯಾವುದೇ ಮಧ್ಯವರ್ತಿಗಳನ್ನು ಸಂಪರ್ಕಿಸದೆ ನೇರವಾರಿ ಇಲಾಖೆಯನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 0816–2275204ನ್ನು ಸಂಪರ್ಕಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಈಶ್ವರ ಕು ಮಿರ್ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4