ತುಮಕೂರು: IISc, IIT & NIT ಸಂಸ್ಥೆಗಳ ಮೂಲಕ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಅಂಡ್ ಮೆಷಿನ್ ಲರ್ನಿಂಗ್ ವೃತ್ತಿಪರ ತರಬೇತಿ ಕೋರ್ಸುಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ ಇಂಜಿನಿಯರಿಂಗ್ ಪದವೀಧರರಿಗೆ ಶಿಷ್ಯವೇತನ/ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವವರು ಕರ್ನಾಟಕ ರಾಜ್ಯದ ಮೂಲ ನಿವಾಸಿಯಾಗಿದ್ದು, ರಾಜ್ಯ/ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯಗಳಲ್ಲಿ BE/B.tech ಕೋರ್ಸುಗಳಲ್ಲಿ ವ್ಯಾಸಂಗ ಮಾಡಿರಬೇಕು ಹಾಗೂ ಕನಿಷ್ಠ ಶೇ.55ರಷ್ಟು ಅಂಕ ಗಳಿಸಿರಬೇಕು. ಈ ಯೋಜನೆಯಡಿ ಶಿಷ್ಯ ವೇತನ ಪಡೆಯಲು ಪದವಿ ಪೂರೈಸಿದ 5 ವರ್ಷದೊಳಗೆ ಅರ್ಜಿ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ನಿಗಧಿತ ನಮೂನೆಯಲ್ಲಿ ಸಕ್ಷಮ ಪ್ರಾಧಿಕಾರದಿಂದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯ 5ಲಕ್ಷ ರೂ.ಗಳು ಮೀರಿರಬಾರದು.
ಆಸಕ್ತರು ಏಪ್ರಿಲ್ 11ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಪಂಚಾಯತ್ ಕಚೇರಿ ಹತ್ತಿರ, ತುಮಕೂರು ತಾಲ್ಲೂಕು ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4