ತುಮಕೂರು: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು IISc, IIT & NIT ಸಂಸ್ಥೆಗಳ ಮೂಲಕ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಅಂಡ್ ಮೆಷಿನ್ ಲರ್ನಿಂಗ್ ವೃತ್ತಿಪರ ತರಬೇತಿ ಕೋರ್ಸುಗಳಿಗಾಗಿ ಪರಿಶಿಷ್ಟ ಪಂಗಡದ ಇಂಜಿನಿಯರಿಂಗ್ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಯ್ಕೆಯಾದವರಿಗೆ 15,000 ರೂ.ಗಳ ಶಿಷ್ಯವೇತನ ನೀಡಲಾಗುವುದು. ಆಸಕ್ತರು ಏಪ್ರಿಲ್ 11ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತುಮಕೂರು, ಮಧುಗಿರಿ, ಶಿರಾ, ಚಿಕ್ಕನಾಯಕನಹಳ್ಳಿ, ಕೊರಟಗೆರೆ, ಗುಬ್ಬಿ, ತಿಪಟೂರು, ತುರುವೇಕೆರೆ, ಕುಣಿಗಲ್ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ/ ಪಾವಗಡ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ/ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4