ತುಮಕೂರು: ಕೃಷಿ ಕ್ಷೇತ್ರದಲ್ಲಿ ಉತ್ಪಾದನೆ ಮತ್ತು ಉತ್ಪಾದಕತೆ ಹೆಚ್ಚಿಸುವ ಹಾಗೂ ರೈತರಲ್ಲಿ ಆರೋಗ್ಯಕರ ಸ್ಪರ್ಧಾತ್ಮಕ ಮನೋಭಾವನೆಯನ್ನು ಬೆಳೆಸುವ ಉದ್ದೇಶದಿಂದ ಕೃಷಿ ಪ್ರಶಸ್ತಿ ನೀಡಲು ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ಪ್ರಶಸ್ತಿಗಾಗಿ ಜಿಲ್ಲೆಯ ಆಸಕ್ತ ರೈತರು ಹಾಗೂ ರೈತ ಮಹಿಳೆಯರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಕೃಷಿಯಲ್ಲಿ ರೈತ ಮಹಿಳೆಯರನ್ನು ಪ್ರೋತ್ಸಾಹಿಸುವ ಹಾಗೂ ಇತರೆ ಮಹಿಳೆಯರನ್ನು ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ಮಹಿಳೆಯರಿಗೆ ಈ ವರ್ಷದಿಂದ ಕೃಷಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಕೃಷಿ ಪ್ರಶಸ್ತಿಗಾಗಿ ಆಯ್ಕೆ ಮಾಡಲಾದ ಬೆಳೆಗಳಲ್ಲಿ ಬೆಳೆ ಸ್ಪರ್ಧೆ ನಡೆಸಿ ಪ್ರತಿ ಬೆಳೆಗೂ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನವಾಗಿ ನಗದು ರೂಪದಲ್ಲಿ ನೀಡಲಾಗುವುದು. ಆಸಕ್ತ ರೈತರು ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್ 31ರೊಳಗಾಗಿ ತಮ್ಮ ಸಮೀಪದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಮತ್ತಿತರ ಮಾಹಿತಿಗಾಗಿ ಸಂಬAಧಿಸಿದ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ರಮೇಶ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q