ತುಮಕೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ಆರೋಗ್ಯ ಅಭಿಯಾನದ ಕಾರ್ಯಕ್ರಮಗಳ ಯೋಜನೆ ಮತ್ತು ಸೇವೆಗಳ ಕುರಿತು ಜನಜಾಗೃತಿ ಮೂಡಿಸಲು ಜಿಲ್ಲೆಯ ಜಾನಪದ/ಬೀದಿ ನಾಟಕ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರತಿ ಬೀದಿ ನಾಟಕ ಜಾನಪದ ಕಲಾತಂಡದಲ್ಲಿ ಇಬ್ಬರು ಮಹಿಳಾ ಕಲಾವಿದರು ಸೇರಿದಂತೆ 8 ಮಂದಿ ಸ್ಥಳೀಯ ಕಲಾವಿದರಿರಬೇಕು. ಇಲಾಖೆ ಯೋಜನೆಗಳ ಬಗ್ಗೆ ಬೀದಿ ನಾಟಕ ಪ್ರದರ್ಶನದ ಅನುಭವವಿರಬೇಕು. ರಾಷ್ಟ್ರೀಯ ಸಂಗೀತ ಮತ್ತು ಡ್ರಾಮಾ ಡಿವಿಜನ್ (National Songs & Drama Division)/ ಕನ್ನಡ ಮತ್ತು ಸಂಸ್ಕೃತಿ ಇಲಾಖೆ/ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನೋಂದಣಿಯಾಗಿರುವ ಕಲಾ ತಂಡಗಳು ಅರ್ಜಿ ಸಲ್ಲಿಸಬಹುದು.
ಆಸಕ್ತಿಯುಳ್ಳ ಬೀದಿ ನಾಟಕ ಜಾನಪದ ಕಲಾತಂಡಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಐಇಸಿ ವಿಭಾಗ, ತುಮಕೂರು ಇವರಿಂದ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಮಾರ್ಚ್ 6ರೊಳಗೆ ಸಲ್ಲಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4