ತುಮಕೂರು: ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಕಲ್ಪಿಸಲು ಕಾಡುಗೊಲ್ಲ ಜನಾಂಗದವರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ, ಅರಿವು–ಶೈಕ್ಷಣಿಕ ನೇರ ಸಾಲ(ಹೊಸದು), ಗಂಗಾ ಕಲ್ಯಾಣ, ಸ್ವಯಂ ಉದ್ಯೋಗ ನೇರಸಾಲ(ಬ್ಯಾಂಕುಗಳ ಸಹಯೋಗದೊಂದಿಗೆ), ಸಾವಲಂಬಿ ಸಾರಥಿ ಹಾಗೂ ವಿದೇಶಿ ವ್ಯಾಸಂಗ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕಾಡುಗೊಲ್ಲ ಜಾತಿಗೆ ಸೇರಿದವರಾಗಿರಬೇಕು. ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ನಲ್ಲಿರುವಂತೆ ಹೆಸರು/ವಿಳಾಸ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಬ್ಯಾಂಕ್ ಪುಸ್ತಕದಲ್ಲಿ ಹೊಂದಾಣಿಕೆಯಾಗಬೇಕು.
ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ತುಮಕೂರು ಒನ್ ಸೇವಾಕೇಂದ್ರಗಳ ಮೂಲಕ ಜುಲೈ 2ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿ ದೂ.ಸಂ. 0816–2005008ನ್ನು ಸಂಪರ್ಕಿಸಬಹುದು ಎಂದು ನಿಗಮದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW