ತುಮಕೂರು: ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಕೌಶಲ್ಯ ಉನ್ನತೀಕರಣ ತರಬೇತಿ, ವಸತಿ ನೇರ ಸಾಲ, ಕಾಯಕಸ್ಪೂರ್ತಿ ಯೋಜನೆ, ಪಾದುಕೆ ಕುಟೀರ ಯೋಜನೆ, ಚರ್ಮಶಿಲ್ಪಿ ಯೋಜನೆ ಮತ್ತು ಮಾರುಕಟ್ಟೆ ಸಹಾಯ ಯೋಜನೆಗಳ ಸೌಲಭ್ಯಕ್ಕಾಗಿ ಚರ್ಮ ಕುಶಲ ಕರ್ಮಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಜಿಲ್ಲಾ ಸಂಯೋಜಕ ಕಲ್ಯಾಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹ ಅಭ್ಯರ್ಥಿಗಳು ಸೌಲಭ್ಯಕ್ಕಾಗಿ ಸುವಿಧಾ ಪೋರ್ಟಲ್ https://sevasindu.karnataka.gov.in ನಲ್ಲಿ ಅಕ್ಟೋಬರ್ 30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಿದ ನಂತರ ಆನ್ ಲೈನ್ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ನಗರದ ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ(ಲಿಡ್ ಕರ್)ದ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 0816-2270592ನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296