ತುಮಕೂರು: ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2024–25ನೇ ಸಾಲಿಗಾಗಿ ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ, ಸಿಖ್ಖಲಿಗಾರ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕೆ ಪ್ರೋತ್ಸಾಹ ಹಾಗೂ ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆಯಡಿ ಸಾಲ/ ಸಹಾಯಧನ ಸೌಲಭ್ಯ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಆರ್ಥಿಕ ಸಬಲೀಕರಣ ಹೊಂದಲಿಚ್ಛಿಸುವ ಸಿಖ್ಖಲಿಗಾರ(ಸಿಖ್ ಜನಾಂಗದವರಿಗೆ ಮಾತ್ರ) ಸಮುದಾಯದವರು ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಸಹಾಯಧನ ಸೌಲಭ್ಯ ಪಡೆಯ ಬಯಸುವ ಮಹಿಳಾ ಸ್ವಸಹಾಯ ಗುಂಪುಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮಹಿಳೆಯರು ಮಾತ್ರ ಈ ಸೌಲಭ್ಯ ಪಡೆಯಬಹುದು.
ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕಾಗಿ ಸಾಲ ಸೌಲಭ್ಯ ಪಡೆಯಲು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರೈಸ್ತ, ಜೈನ, ಬೌದ್ಧ, ಸಿಖ್ ಹಾಗೂ ಪಾರ್ಸಿ ಜನಾಂಗದವರಾಗಿರಬೇಕು.
ಸಾಲ/ಸಹಾಯಧನ ಸೌಲಭ್ಯ ಪಡೆಯಲಿಚ್ಛಿಸುವ ಅಲ್ಪಸಂಖ್ಯಾತ ಸಮುದಾಯದವರು ಜಾಲತಾಣ kmdconline.karnataka.gov.in ಮೂಲಕ ಆಗಸ್ಟ್ 31ರೊಳಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಆಜಾದ್ ಭವನ, ಇಂದಿರಾ ಕಾಲೇಜು ಮುಂಭಾಗ, ಉಪ್ಪಾರಹಳ್ಳಿ, ತುಮಕೂರು–572102 ಇವರಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 0816–2281023ನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಮೊಹಮ್ಮದ್ ಅಲೀಂ ಉಲ್ಲಾ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q