ತುಮಕೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಮೆಟ್ರಿಕ್ ಪೂರ್ವ(1 ರಿಂದ 8ನೇ ತರಗತಿ) ಹಾಗೂ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಎಸ್.ಎಸ್.ಪಿ ರಾಜ್ಯ ವಿದ್ಯಾರ್ಥಿ ವೇತನ ನೀಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧರು ಮತ್ತು ಪಾರ್ಸಿ ವಿದ್ಯಾರ್ಥಿಗಳು ಜಾಲತಾಣ https://ssp.karnataka.gov.in ಮೂಲಕ ಜನವರಿ 15ರೊಳಗಾಗಿ ಅರ್ಜಿ ಸಲ್ಲಿಸಿ, ನಂತರ ಸಲ್ಲಿಸಿದ ಅರ್ಜಿ ಪ್ರತಿಯನ್ನು ಸಂಬಂಧಿಸಿದ ಶಾಲೆಗಳಿಗೆ ನೀಡಬೇಕು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಅಥವಾ ನಗರದ ಉಪ್ಪಾರ ಹಳ್ಳಿ ಇಂದಿರಾ ಕಾಲೇಜು ಮುಂಭಾಗ ಮೌಲಾನಾ ಆಜಾದ್ ಭವನದಲ್ಲಿರುವ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಜಿಲ್ಲಾ ಅಧಿಕಾರಿ ಶಬ್ಬೀರ್ ಅಹಮ್ಮದ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx