ತುಮಕೂರು: ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ ಮಾಸಿಕ 25,000 ರೂ. ಗಳ ಶಿಷ್ಯವೇತನ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಯಾವುದೇ ಫೆಲೋಶಿಪ್ ಪಡೆಯದ ಅಭ್ಯರ್ಥಿಗಳು ಡಿಸೆಂಬರ್ 14ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಪಾವಗಡ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದೂ.ವಾ.ಸಂ. 0816–2279153ನ್ನು ಸಂಪರ್ಕಿಸಬೇಕೆಂದು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296