ತುಮಕೂರು: ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಪೋಕ್ಸೊ ಕಾಯ್ದೆಯಡಿ ಸಂತ್ರಸ್ತ ಮಕ್ಕಳ ವ್ಯಾಸಂಗ ಹಾಗೂ ಭವಿಷ್ಯದ ದೃಷ್ಟಿಯಿಂದ ಬೆಂಬಲ ವ್ಯಕ್ತಿಗಳಾಗಿ ಸೇವೆ ಸಲ್ಲಿಸುವವರಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸುವವರು ಸಮಾಜ ಕಾರ್ಯ ವಿಷಯದಲ್ಲಿ ಪದವಿ ಹೊಂದಿದ್ದು, ಮಕ್ಕಳೊಂದಿಗೆ ಕೆಲಸ ಮಾಡಿದ ಕನಿಷ್ಟ 3 ವರ್ಷಗಳ ಅನುಭವ ಹೊಂದಿರಬೇಕು. ಮಕ್ಕಳ ಆರೈಕೆ ಕೇಂದ್ರದಲ್ಲಿ ಮಕ್ಕಳೊಂದಿಗೆ ಕೆಲಸ ಮಾಡುವ ಅಧಿಕಾರಿಗಳು/ ಮಕ್ಕಳ ಹಕ್ಕುಗಳ ಕ್ಷೇತ್ರದಲ್ಲಿ ಕೆಲಸ ಮಾಡುವ ಯಾವುದೇ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಕ್ಷೇತ್ರ ಕಾರ್ಯ ನಿರ್ವಹಿಸಲು ಹಾಗೂ ಅಪರಾಧ ನ್ಯಾಯ ವ್ಯವಸ್ಥೆಯ ಮೂಲಕ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಸಹಾಯ ಮಾಡಲು ತರಬೇತಿ ನೀಡಲಾಗುವುದಲ್ಲದೆ ಪ್ರತಿ ಪ್ರಕರಣಕ್ಕೆ 3000 ರೂ. ಸಂಭಾವನೆ ಕೊಡಲಾಗುವುದು.
ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ 2025ರ ಜನವರಿ 6ರೊಳಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮೊದಲನೇ ಮಹಡಿ, ಮಹಾತ್ಮಗಾಂಧಿ ಕ್ರೀಡಾಂಗಣ, ತುಮಕೂರು ಇವರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂಖ್ಯೆ:0816-2956699ನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದಿನೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx