ತುಮಕೂರು: ಹಿರೇಹಳ್ಳಿ ಕೈಗಾರಿಕಾ ಪ್ರದೇಶ ಎಸ್.ಬಿ.ಐ. ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು ಗ್ರಾಮೀಣ ನಿರುದ್ಯೋಗಿ ಯುವತಿಯರಿಗೆ ಉಚಿತ ಊಟ, ವಸತಿಯೊಂದಿಗೆ 30 ದಿನಗಳ ಮಹಿಳಾ ಹೊಲಿಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ.
ಜಿಲ್ಲಾ ವ್ಯಾಪ್ತಿಯ 18 ರಿಂದ 45 ವರ್ಷದೊಳಗಿನ ಕನ್ನಡ ಓದಲು ಹಾಗೂ ಬರೆಯಲು ಬರುವಂತಹದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಫೆಬ್ರವರಿ 20 ಕಡೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ.0816–2243386, ಮೊ.ಸಂ.9738351048/9663680001ನ್ನು ಸಂಪರ್ಕಿಸಬೇಕೆಂದು ಸಂಸ್ಥೆಯ ನಿರ್ದೇಶಕ ವಾದಿರಾಜ್ ಕೆ.ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4