ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದು, ಪ್ರಸ್ತುತ ಜಿಲ್ಲೆಯ ನಗರ, ಪ್ರತಿ ತಾಲ್ಲೂಕು ಹಾಗೂ ಹೋಬಳಿ ಕೇಂದ್ರದ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರಾಮುವಿ ಕಲಿಕಾರ್ಥಿ ಸಹಾಯ ಕೇಂದ್ರ(ಅಧ್ಯಯನ ಕೇಂದ್ರ)ಗಳನ್ನು ತೆರೆಯಲು ಅರ್ಜಿ ಆಹ್ವಾನಿಸಿದೆ.
ಆಸಕ್ತ ಪ್ರಥಮ ದರ್ಜೆ ಕಾಲೇಜುಗಳು ಜನವರಿ 18ರೊಳಗೆ ಕರಾಮುವಿಯ ಅಧಿಕೃತ ವೆಬ್ ಸೈಟ್ www.ksoumysuru.ac.in ಅಥವಾ https://ksouportal.com/reg_sc/StudyCentreRegistration.aspx ಮೂಲಕ ಅರ್ಜಿ ಸಲ್ಲಿಸಿ ಅರ್ಜಿಯ ಪ್ರತಿಯನ್ನು ಡೀನ್(ಅಧ್ಯಯನ ಕೇಂದ್ರ), ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮುಕ್ತ ಗಂಗೋತ್ರಿ, ಮೈಸೂರು–06 ಇವರಿಗೆ ಸಲ್ಲಿಸಬೇಕು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಕರಾಮುವಿ ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಯಾವುದೇ ಶುಲ್ಕ ಪಾವತಿ ಮಾಡುವಂತಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕರಾಮುವಿ, ತುಮಕೂರು ಪ್ರಾದೇಶಿಕ ಕೇಂದ್ರ, ಟೂಡಾ ಲೇಔಟ್, ರಾಜೀವ್ಗಾಂಧಿ ನಗರ, ಗಂಗಸಂದ್ರ ಮುಖ್ಯರಸ್ತೆ, ಮೆಳೆಕೋಟೆ, ತುಮಕೂರು-572105 ಅಥವಾ ದೂ.ವಾ.ಸಂಖ್ಯೆ-0816-2955580, ಮೊ.ಸಂ.9844506629ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಾದೇಶಿಕ ನಿರ್ದೇಶಕ ಡಾ: ಲೋಕೇಶ ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx