ತುಮಕೂರು: ರಾಜ್ಯ ಸರ್ಕಾರಿ ನೌಕರರ ಸಂಘದ ‘ನಮ್ಮಭಿಮಾನದ ಅಭಿನಂದನೆ’ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುತ್ತಿದ್ದು, ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಸೇರಿದಂತೆ ಹಲವು ಗಣ್ಯರಿಗೆ ಅಭಿನಂದನೆ ಸಲ್ಲಿಸಿ ಸರ್ಕಾರಿ ನೌಕರರ ಕುಂದುಕೊರತೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗುತ್ತಿದ್ದು, ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ನೌಕರರು ಭಾಗವಹಿಸಿ ಯಶ್ವಸಿಗೊಳಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷ ಎನ್.ನರಸಿಂಹರಾಜು ಕರೆ ನೀಡಿದ್ದಾರೆ.
ಬೆಂಗಳೂರು ನಗರದ ಅರಮನೆ ಮ್ಯೆದಾನದಲ್ಲಿ ಆಗಸ್ಟ್ 17ರ ಶನಿವಾರ ಬೆಳಗ್ಗೆ 10ಕ್ಕೆ ಆಯೋಜಿಸಲಾಗಿರುವ ‘ನಮ್ಮಭಿಮಾನದ ಅಭಿನಂದನೆ’ ಸಮಾರಂಭದ ಕುರಿತು ವಿವಿಧ ಶಾಖೆಗಳ ಅಧ್ಯಕ್ಷರು, ಮತ್ತು ಸಂಘದ ಪದಾಧಿಕಾರಿಗಳು ಹಾಗೂ ನಿರ್ದೇಶಕರುಗಳಿಗೆ ಮಾಹಿತಿ ನೀಡಲಾಗಿದೆ. ಸರ್ಕಾರಿ ನೌಕರರ ಸಂಘದಿಂದ ನೀಡಿರುವ ಪೋಸ್ಟರ್ ಗಳನ್ನು ಎಲ್ಲಾ ಸರ್ಕಾರಿ ಕಛೇರಿ/ ಸಂಸ್ಥೆಗಳಲ್ಲಿ ಅಂಟಿಸುವ ಮೂಲಕ ಕಾರ್ಯಕ್ರಮದ ಬಗ್ಗೆ ವ್ಯಾಪಕ ಪ್ರಚಾರ ನೀಡಲಾಗುತ್ತಿದ್ದು, ರಾಜ್ಯ ಸಂಘದಿAದ ನೀಡಲಾಗಿರುವ ಇಮೇಜ್ ಅನ್ನು ಎಲ್ಲ ನೌಕರರು ತಮ್ಮ ಭಾವಚಿತ್ರ ಸಮೇತ ಮೊಬೈಲ್ ಡಿಪಿಯಲ್ಲಿ ಹಾಕಿಕೊಳ್ಳುವ ಬಗ್ಗೆ ಎಂದು ಸೂಚಿಸಲಾಗಿದೆ.
ಸಾರಿಗೆ ಸೌಲಭ್ಯ:
ಕಾರ್ಯಕ್ರಮಕ್ಕೆ ನೌಕರರನ್ನು ಕರೆತರಲು ಸೂಕ್ತ ಸಾರಿಗೆ ವ್ಯವಸ್ಥೆ ಮಾಡಲಾಗಿದ್ದು, ಅಂದು ಬೆಳಗ್ಗೆ ಲಘು–ಉಪಾಹಾರ ಮತ್ತು ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿರುತ್ತದೆ. ತ್ರಿಪುರವಾಸಿನಿ ಆವರಣದಲ್ಲಿ ವಾಹನ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ.
ತುಮಕೂರು ನಗರದ ಗಾಜಿನ ಮನೆ ಆವರಣದಿಂದ ಆಗಸ್ಟ್ 17ರ ಶನಿವಾರ ಬೆಳಗ್ಗೆ 7:30ಕ್ಕೆ ಬಸ್ಸುಗಳು ಹೊರಡಲಿದ್ದು, ತುಮಕೂರು ತಾಲ್ಲೂಕಿನಲ್ಲಿ ಕೆಲಸ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರು ಸರಿಯಾದ ಸಮಯಕ್ಕೆ ಆಗಮಿಸುವಂತೆ ಕೋರಲಾಗಿದೆ.
ಸಮಸ್ತ ಸರ್ಕಾರಿ ನೌಕರರ ಪರವಾಗಿ ರಾಜ್ಯಾಧ್ಯಕ್ಷರಾದ ಷಡಾಕ್ಷರಿಯವರಿಗೆ ಅಭಿನಂದನೆ:
7ನೇ ವೇತನ ಆಯೋಗದ ಜಾರಿಗಾಗಿ ಅವಿರತವಾಗಿ ಶ್ರಮಿಸಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಷಡಾಕ್ಷರಿರವರಿಗೂ ಕೂಡ ಸಮಸ್ತ ಸರ್ಕಾರಿ ನೌಕರರ ಪರವಾಗಿ ಅಭಿನಂದನೆ ಸಲ್ಲಿಸಲಾಗುತ್ತದೆ, ರಾಜ್ಯಾಧ್ಯಕ್ಷರಾದ ಷಡಾಕ್ಷರಿವರು ಸರ್ಕಾರಿ ನೌಕರರ ಹಿತಾಸಕ್ತಿಗಾಗಿ ಹಲವು ಆದೇಶಗಳಿಗೆ ಕಾರಣೀಕರ್ತರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷ ಎನ್.ನರಸಿಂಹರಾಜು ತಿಳಿಸಿದ್ದಾರೆ
NPS, OPS ಕುರಿತು ಮಾಹಿತಿಗಾಗಿ ಕಾರ್ಯಾಗಾರ:
ನಮ್ಮಭಿಮಾನದ ಅಭಿನಂದನೆ ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರಿಗಾಗಿ ಕಾರ್ಯಗಾರವನ್ನೂ ಸಹ ಆಯೋಜಿಸಿದ್ದು, ಬಿ. ಪಿ. ರಾವತ್, ರಾಷ್ಟ್ರೀಯ ಅಧ್ಯಕ್ಷರು, (NOPRUF) ನವದೆಹಲಿ ಹಾಗೂ ರಮೇಶ್ ಸಂಗಾ ‘ಒ.ಪಿ.ಎಸ್. ಯೋಜನೆಯ ಜಾರಿಯ ಬಗ್ಗೆ’ ಹಾಗೂ ದೇವರಾಜು, ಸರ್ಕಾರದ ಉ.ಕಾ.(ನಿ) ವಿಧಾನಸೌಧ ಇವರು ‘ಪಿ. ಎಸ್. ಟಿ ಶಿಕ್ಷಕರ C&R ನಿಯಮಗಳ ತಿದ್ದುಪಡಿ’ ಕುರಿತು ಉಪನ್ಯಾಸ ನೀಡಲಿದ್ದಾರೆ.
ಸರ್ಕಾರಿ ನೌಕರರಿಗೆ ಓ.ಓ.ಡಿ ಸೌಲಭ್ಯ:
ನಮ್ಮಭಿಮಾನದ ಅಭಿನಂದನೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಅಧಿಕಾರಿ/ ನೌಕರರಿಗೆ ಓ.ಓಡಿ ಸೌಲಭ್ಯವಿದ್ದು. ಹಾಜರಾತಿ ಪ್ರಮಾಣ ಪತ್ರವನ್ನು ಕಾರ್ಯಕ್ರಮ ಸ್ಥಳದಲ್ಲೇ ಭಾಗವಹಿಸಿದ ನೌಕರರಿಗೆ ಮಾತ್ರ ವಿತರಿಸಲಾಗುವುದು, ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸುತ್ತೋಲೆಯಲ್ಲಿ ಮಾಹಿತಿ ನೀಡಿದೆ.
ಕರ್ನಾಟಕ ಸರ್ಕಾರ ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಂತೆ ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ ೭ನೇ ವೇತನ ಆಯೋಗದ ವರದಿ ಶಿಫಾರಸ್ಸನ್ನು ಸರ್ಕಾರ ಜಾರಿಗೊಳಿಸಿದ್ದು,. ವೇತನ ಆಯೋಗದ ವರದಿ ಜಾರಿ ಬಳಿಕ ಆಗಸ್ಟ್ನಿಂದಲೇ ಸರ್ಕಾರಿ ನೌಕರರ ವೇತನ, ಭತ್ಯೆ, ಪಿಂಚಣಿಯಲ್ಲಿ ಏರಿಕೆಯಾಗಿದೆ. ಇದರಿಂದಾಗಿ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ‘ನಮ್ಮಭಿಮಾನದ ಅಭಿನಂದನಾ ಸಮಾರಂಭ’ ಆಯೋಜನೆ ಮಾಡಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷ ಎನ್.ನರಸಿಂಹರಾಜು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q