ಉತ್ತರ ಪ್ರದೇಶದ ಔರೈಯಾದಲ್ಲಿನ ದಿಬಿಯಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಗಿ ಹೊಲವೊಂದರಲ್ಲಿ ಸೋಮವಾರ 17 ವರ್ಷದ ಬಾಲಕಿಯ ಬೆತ್ತಲೆ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ ಎಂದು ಬಾಲಕಿಯ ಮನೆಯವರು ಆರೋಪಿಸಿದ್ದಾರೆ.
ಈ ಬಗ್ಗೆ ಬಾಲಕಿಯ ಕುಟುಂಬಸ್ಥರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಬೆಳಗ್ಗೆ ಮಲ ವಿಸರ್ಜನೆಗೆಂದು ಹೊರ ಹೋಗಿದ್ದ ಆಕೆ ಎಷ್ಟೋ ಹೊತ್ತಾದರೂ ಮನೆಗೆ ಬಾರದೇ ಇದ್ದುದರಿಂದ ಆಕೆಗಾಗಿ ಹುಡುಕಾಟ ನಡೆಸಿದ್ದು, ಈ ವೇಳೆ ಗದ್ದೆಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ.
ಘಟನೆ ಬಳಿಕ ಔರೈಯಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ ಪಿ) ಚಾರು ನಿಗಮ್ ಅವರು ವಿಧಿವಿಜ್ಞಾನ ತಜ್ಞರೊಂದಿಗೆ ಗ್ರಾಮಕ್ಕೆ ಆಗಮಿಸಿದ್ದಾರೆ ಮತ್ತು ಪ್ರಕರಣವನ್ನು ಭೇದಿಸಲು ವಿಶೇಷ ಕಾರ್ಯಾಚರಣೆ ಗುಂಪು ಸೇರಿದಂತೆ 10 ಪೊಲೀಸ್ ತಂಡಗಳನ್ನು ನಿಯೋಜಿಸಿದರು.
ಪೊಲೀಸರು ಶವವನ್ನು ಹೊತ್ತೊಯ್ಯುವ ಮತ್ತು ಬಾಲಕಿ ಹಿಂದೆ ಕುಟುಂಬಸ್ಥರು ಹೋಗುತ್ತಿರುವ ವಿಡಿಯೊವನ್ನು ಕಾಂಗ್ರೆಸ್ ಹಂಚಿಕೊಂಡಿದೆ. ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, ‘ಔರೈಯಾದಲ್ಲಿ 17 ವರ್ಷದ ಬಾಲಕಿಯ ಬೆತ್ತಲೆ ದೇಹವು ಗದ್ದೆಯಲ್ಲಿ ಪತ್ತೆಯಾಗಿದೆ. ಪೊಲೀಸರು ಆಗಮಿಸಿ ಶವದೊಂದಿಗೆ ಓಡಿಹೋಗಲು ಪ್ರಾರಂಭಿಸಿದರು. ಬಡ ಕುಟುಂಬವು ಹಿಂದೆ ಓಡುತ್ತಿದೆ. ಉತ್ತರ ಪ್ರದೇಶ ಮಹಿಳೆಯರ ವಿರುದ್ಧದ ಅಪರಾಧಗಳಲ್ಲಿ ‘ನಂಬರ್ 1’ ಎಂದಿದೆ.
ಕಾಂಗ್ರೆಸ್ ಆರೋಪದ ಬಗ್ಗೆ ಸ್ಪಷ್ಟನೆ ನೀಡಿರುವ ಎಸ್ಪಿ ನಿಗಮ್, ಯಾವುದೇ ರೀತಿಯಲ್ಲಿ ಬಲವಂತವಾಗಿ ದೇಹವನ್ನು ತೆಗೆದುಕೊಂಡಿಲ್ಲ. ಮರಣೋತ್ತರ ಪರೀಕ್ಷೆಯನ್ನು ವಿಡಿಯೋ ಮಾಡಿ ಕುಟುಂಬದವರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ಎಸ್ಪಿ ನಿಗಮ್ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy