ಹಾಸನ: ಹಾಸನ ಜಿಲ್ಲೆಯ ಅರಕಲಗೂಡು ವಿಧಾನಸಭಾ ಕ್ಷೇತ್ರದ ಯುವ ನಾಯಕ ಹಾಗೂ ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾದ ಸಿ.ಡಿ.ದಿವಾಕರ್ ಗೌಡ ಅವರ ಜನ್ಮದಿನವನ್ನು ಅವರ ಅಭಿಮಾನಿಗಳು ಅತ್ಯಂತ ವಿಜ್ರಂಭಣೆಯಿಂದ ಆಚರಿಸಿದರು.
ಹಳ್ಳಿ ಮೈಸೂರಿನಲ್ಲಿ ಅದ್ಧೂರಿ ಸಂಭ್ರಮ: ದಿವಾಕರ್ ಗೌಡ ಅವರ ಹುಟ್ಟುಹಬ್ಬಕ್ಕೆ ಎರಡು ದಿನ ಮುಂಚಿತವಾಗಿಯೇ ಹಳ್ಳಿ ಮೈಸೂರು ಹೋಬಳಿಯ ಅಭಿಮಾನಿ ಬಳಗದ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹಳ್ಳಿ ಮೈಸೂರು ಸರ್ಕಲ್‌ನಲ್ಲಿ ಸೇರಿದ್ದ ಸಾವಿರಾರು ಅಭಿಮಾನಿಗಳು, ಬೃಹತ್ ಕೇಕ್ ಕತ್ತರಿಸುವ ಮೂಲಕ ತಮ್ಮ ನೆಚ್ಚಿನ ನಾಯಕನಿಗೆ ಶುಭಾಶಯ ಕೋರಿದರು. ಇದೇ ಸಂದರ್ಭದಲ್ಲಿ ಪಟಾಕಿ ಸಿಡಿಸಿ, ಜಯಘೋಷ ಹಾಕುವ ಮೂಲಕ ಹಬ್ಬದ ವಾತಾವರಣ ನಿರ್ಮಿಸಲಾಗಿತ್ತು.
ಈ ಸಂಭ್ರಮಾಚರಣೆಯಲ್ಲಿ ದಿವಾಕರ್ ಗೌಡ ಅವರ ಸಾವಿರಾರು ರೈತ ಅಭಿಮಾನಿಗಳು ಪಾಲ್ಗೊಂಡಿದ್ದರು. ವಿಶೇಷವಾಗಿ ಸಂಗೊಳ್ಳಿ ರಾಯಣ್ಣ ಕುರಿ ಮತ್ತು ಉಣ್ಣೆ ಉತ್ಪಾದಕರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗವಹಿಸಿ ಶುಭ ಹಾರೈಸಿದರು.
ಕ್ಷೇತ್ರದ ಯುವ ಜನತೆ ಮತ್ತು ರೈತರ ಪರವಾಗಿ ನಿರಂತರವಾಗಿ ಧ್ವನಿ ಎತ್ತುತ್ತಿರುವ ದಿವಾಕರ್ ಗೌಡ ಅವರ ಹುಟ್ಟುಹಬ್ಬವನ್ನು ಹಳ್ಳಿ ಮೈಸೂರು ಭಾಗದ ಜನರು ಹಬ್ಬದಂತೆ ಆಚರಿಸಿದ್ದು ಗಮನಾರ್ಹವಾಗಿತ್ತು.
ವರದಿ: ಮಂಜು ಶ್ರವಣೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


