ಬೆಂಗಳೂರು : ಹುತಾತ್ಮ ಅರಣ್ಯ ಇಲಾಖೆಯ ಸಿಬ್ಬಂದಿಗಳ ಪರಿಹಾರವನ್ನು 50 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಹುತಾತ್ಮ ಅರಣ್ಯ ಇಲಾಖೆಯ ಸಿಬ್ಬಂದಿಗಳ ಪರಿಹಾರ ಮೊತ್ತವನ್ನು 50 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಯಡಿಯೂರಪ್ಪ ಅವರು 30 ಲಕ್ಷ ರೂ.ಗೆ ಏರಿಸಿದ್ದರು. ಇದೀಗ 50 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.
ನೇಮಕಾತಿ ಸಂಬಂಧಿ ಎಲ್ಲಾ ಕೆಲಸಗಳು ಸುಲಭ ಮಾಡುತ್ತೇವೆ. ಅರಣ್ಯವನ್ನು ನೀವು ರಕ್ಷಣೆ ಮಾಡಿ, ನಾವು ನಿಮ್ಮನ್ನು ರಕ್ಷಣೆ ಮಾಡುತ್ತೇವೆ. ಹೊಸ ವಿಧಾನದ ನೈಸರ್ಗಿಕ ಸಂಪತ್ತು ಆಕರ್ಷಿಸುವ ಕೆಲಸ ಆಗುತ್ತಿದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz