ಬಸವಣ್ಣ ದೇವಸ್ಥಾನದ ಅರ್ಚಕ ಪ್ರಕಾಶ್ ಕುಂದಗೋಳಮಠ ಎಂಬುವರಿಗೆ ಗ್ರಾಮಸ್ಥರು ಕ್ಷುಲ್ಲಕ ವಿಚಾರಕ್ಕಾಗಿ ದೇವಸ್ಥಾನದಲ್ಲಿ ಪೂಜಾರಿಯನ್ನು ಸ್ಥಳೀಯರೇ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಹುಬ್ಬಳ್ಳಿಯ ಕಂಪ್ಲಿಕೊಪ್ಪ ಗ್ರಾಮದಲ್ಲಿ ನಡೆದಿದೆ.
ಪೂಜೆಯ ವಿಚಾರವಾಗಿ ಪೂಜಾರಿ ಮತ್ತು ಗ್ರಾಮಸ್ಥರ ನಡುವೆ ಗಲಾಟೆ ನಡೆದಿದೆ. ಅದು ವಿಕೋಪಕ್ಕೆ ಹೋಗಿ ಪೂಜಾರಿಯನ್ನು ಮನಬಂದಂತೆ ಥಳಿಸಿದ್ದಾರೆ. ಪೂಜಾರಪ್ಪ ಪ್ರಕಾಶ್ ಕುಂದಗೋಳಮಠ ತುಂಬಾ ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಆದರೆ ಇತ್ತೀಚೆಗೆ ಅರ್ಚಕನ ನಡವಳಿಕೆಯಲ್ಲಿ ಬದಲಾವಣೆಯಾಗಿದೆ ಎಂದು ಗ್ರಾಮಸ್ಥರು ಹೊಸ ಅರ್ಚಕರ ನೇಮಕಕ್ಕೆ ಚಿಂತನೆ ನಡೆಸಿದ್ದರು.
ಆದರೆ ಗ್ರಾಮಸ್ಥರ ಈ ನಿರ್ಧಾರಕ್ಕೆ ಪ್ರಕಾಶ್ ಒಪ್ಪಿಗೆ ನೀಡಿರಲಿಲ್ಲ. ಈ ವಿಚಾರವಾಗಿ ದೇವಸ್ಥಾನ ಆವರಣದಲ್ಲಿ ಗಲಾಟೆ ಆರಂಭವಾಗಿದೆ. ಇನ್ನೂ ಗಲಾಟೆಯಲ್ಲಿ ಅರ್ಚಕ ಪ್ರಕಾಶ್‌ಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಜಗಳ ಬಿಡಿಸಲು ಬಂದ ಅರ್ಚಕನ ಮಗನಿಗೂ ಗ್ರಾಮಸ್ಥರು ಥಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


