ಬೆಂಗಳೂರು: ಹಸಿರು ಬಟಾಣಿಯಲ್ಲಿ ಕೃತಕ ಕಲಬೆರಕೆ ಅಂಶ ಪತ್ತೆಯಾಗಿದೆ. ಪ್ರಾಥಮಿಕ ಲ್ಯಾಬ್ ವರದಿಯಲ್ಲಿ ಸ್ಫೋಟಕ ಅಂಶ ಬಯಲಾಗಿದೆ ಎನ್ನಲಾಗಿದೆ. ಇದು ಸಾರ್ವಜನಿಕರಲ್ಲಿ ಆತಂಕ್ಕೆ ಕಾರಣವಾಗಿದೆ.
ಬ್ರಿಲಿಯಂಟ್ ಬ್ಲೂ, ಟೆಟಾರ್ಜಿನ್ ಅಂದ್ರೆ ಹಳದಿ ಬಣ್ಣವಿರುವ ರಾಸಾಯನಿಕ ಇರುವುದು ಪತ್ತೆಯಾಗಿದೆ. ಬಟಾಣಿಯಲ್ಲೂ ಕ್ಯಾನ್ಸರ್ ತರುವ ಅಂಶ ಬೆಳಕಿಗೆ ಬಂದಿದೆ ಎಂದು ವರದಿ ಹೇಳಿದೆ.
ಈಗಾಗಲೇ ಆಹಾರ ಇಲಾಖೆ ಆಯುಕ್ತ ಶ್ರೀನಿವಾಸ್ ಕಲರ್ ಬಳಕೆ ನಿಷೇಧದ ಬಗ್ಗೆ ಶಿಫಾರಸು ಮಾಡಿದ್ದಾರೆ ಎಂದು ಹೇಳಲಾಗಿದೆ. ನಂತರ ಮತ್ತೊಂದು ಸುತ್ತಿನ ಪರೀಕ್ಷೆ ಬಳಿಕ ಬಟಾಣಿಗೆ ಬಣ್ಣ ಬಳಕೆ ಬ್ಯಾನ್‌ಗೆ ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4