ಬೆಂಗಳೂರು: ನಾವು ನಾಗಮಂಗಲದಲ್ಲಿದ್ದೇವೆಯೋ? ಪಾಕಿಸ್ತಾನದಲ್ಲೋ? ಎಂದು ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ಶಾಂತಿಯುತವಾಗಿ ಗಣಪತಿ ವಿಸರ್ಜನೆಗೆ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ನಡೆಸಿದ್ದಾರೆ. ಪೆಟೋಲ್ ಬಾಂಬ್ ಸ್ಪೋಟಿಸಿ ತಲ್ವಾರ್ ಝಳಪಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದುಗಳನ್ನು ಗುರಿಯಾಗಿಸಿ, ಹಿಂದು ಆಚರಣೆಗಳಿಗೆ ಅಡ್ಡಿಪಡಿಸುವ ಘಟನೆಗಳು ಹೆಚ್ಚುತ್ತಿವೆ.
ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಇನ್ನೊಂದು ನಿದರ್ಶನ. ಇದರ ಹೊಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೊರಬೇಕು ಎಂದು ಒತ್ತಾಯಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296