ತುಮಕೂರು: ಮೈಕ್ರೋ ಫೈನಾನ್ಸ್ ನಲ್ಲಿ ಹಣಕೊಡಿಸೋದಾಗಿ ನಂಬಿಸಿ 50 ಲಕ್ಷಕ್ಕೂ ಅಧಿಕ ಹಣ ಡ್ರಾ ಮಾಡಿ ದಂಪತಿ ಪರಾರಿಯಾಗಿರುವ ಘಟನೆ ದೊಡ್ಡಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ದೊಡ್ಡಹೊಸಹಳ್ಳಿ ಗ್ರಾಮದಲ್ಲಿ ಕಳೆದ 12 ವರ್ಷಗಳಿಂದ ವಾಸವಿದ್ದ ದಂಪತಿ, 10ಕ್ಕೂ ಅಧಿಕ ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಗ್ರಾಮಸ್ಥರ ಹೆಸರಿನಲ್ಲಿ ಸಾಲ ತೆಗೆದಿದ್ದರು.
ಸಾಲ ಪಡೆದು ಮರಳಿಸದೆ ಹಣದ ಸಮೇತ ದಂಪತಿಗಳು ಪರಾರಿಯಾಗಿದ್ದಾರೆ. ಮೈಕ್ರೋ ಫೈನಾನ್ಸ್ ಕಂಪನಿ ಜತೆಗೆ ದಂಪತಿಗಳಿಗೆ ಒಡನಾಟವಿದ್ದು, ಗ್ರಾಮದ 35 ಮಂದಿಗೆ ಸಾಲ ಕೊಡಿಸಿ ಪ್ರತಿ ತಿಂಗಳು ನಾವೇ ಹಿಂತಿರುಗಿಸೋದಾಗಿ ಹೇಳಿದ್ದರು ಎನ್ನಲಾಗಿದೆ.
ಸದ್ಯ 50 ಲಕ್ಷಕ್ಕೂ ಹೆಚ್ಚು ಹಣ ಪಡೆದು ದಂಪತಿ ಪರಾರಿಯಾಗಿದ್ದಾರೆ. ಸಾಲ ಮರು ಪಾವತಿ ಮಾಡುವಂತೆ ಇದೀಗ ಮೈಕ್ರೋ ಫೈನಾನ್ಸ್ ಕಂಪನಿ ಗ್ರಾಮಸ್ಥರಿಗೆ ನೋಟಿಸ್ ನೀಡಿದೆ. ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4