ತುಮಕೂರು: ಗುಬ್ಬಿ ತಾಲ್ಲೂಕಿನ ಕಳೆದ ರಾತ್ರಿ ಬಿರುಗಾಳಿ ಸಮೇತ ಮಳೆಯಾಗಿದ್ದು, ಪರಿಣಾಮವಾಗಿ ಅಡಿಕೆ, ತೆಂಗಿನ ಮರಗಳು ಧರೆಗುರುಳಿವೆ.
ಗುಬ್ಬಿ ತಾಲ್ಲೂಕಿನ ಚಂದ್ರಶೇಖರಪುರದ ಬಳಿ ಘಟನೆ ನಡೆದಿದೆ. ಬಿರುಗಾಳಿ ಮಳೆಯ ಪರಿಣಾಮ ವಿದ್ಯುತ್ ಕಂಬಗಳು ಬಿದ್ದಿದ್ದು, ಮನೆ ಸೀಟುಗಳು ಗಾಳಿಗೆ ಹಾರಿ ಹೋಗಿವೆ.
ದ್ವಿಚಕ್ರವಾಹನ ಹಾಗೂ ಕಾರುಗಳ ಮೇಲೆ ಮರದ ಕೊಂಬೆಗಳು ಬಿದ್ದು ವಾಹನಗಳು ಜಖಂ ಆಗಿರುವ ಘಟನೆ ನಡೆದಿದೆ. ಬಿಸಿಲಿನ ತಾಪದಿಂದ ಒಂದೆಡೆ ಜನರು ತಂಪಾಗಿದ್ದರೆ, ಇನ್ನೊಂದೆಡೆ ಮಳೆಯಿಂದಾಗಿ ಹಾನಿಯಾಗಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4