ತಿಪಟೂರು: ಹಿಂದಿನ ಯು.ಪಿ.ಎ. ಸರ್ಕಾರದ ಅವಧಿಯಲ್ಲಿ ಕರ್ನಾಟಕ ಕೆ ರೈಲ್ವೆಗೆ ಕೇವಲ 830 ಕೋಟಿ ರೂ. ನೀಡಲಾಗುತ್ತಿತ್ತು. ಆದರೆ ನರೇಂದ್ರ ಮೋದಿ ಸರ್ಕಾರ ರೂ. 7,750 ಕೋಟಿ ಅನುದಾನ ನೀಡಿ, ರಾಜ್ಯಕ್ಕೆ ಪ್ರೋತ್ಸಾಹ ನೀಡಲಾಗಿದೆ ಎಂದು ಕೇಂದ್ರ ರೈಲ್ವೇ ಮತ್ತು ಜಲ ಶಕ್ತಿ ಖಾತೆಯ ಸಹಾಯಕ ಸಚಿವ ವಿ. ಸೋಮಣ್ಣ ತಿಳಿಸಿದರು.
ನಗರದ ರೈಲು ನಿಲ್ದಾಣದ ರೈಲು ನಿಲುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ವಿಮಾನ ನಿಲ್ದಾಣ ರೀತಿಯಲ್ಲಿ ಭಾರತೀಯ ರೈಲ್ವೆ ಹಾಗೂ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಹೆದ್ದಾರಿ ಕಾಮಗಾರಿಗಳಿಂದ ವಿಳಂಬವಾಗಿತ್ತು. ಶೀಘ್ರದಲ್ಲಿ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮುಕ್ತಾಯಗೊಳಿಸಲು ತಿಳಿಸಲಾಗಿದೆ, ತಿಪಟೂರಿನಲ್ಲಿ ಬೆಂಗಳೂರು ಶಿವಮೊಗ್ಗ ಮತ್ತು ಬೆಂಗಳೂರು ಹುಬ್ಬಳ್ಳಿ ಜನ ಶತಾಬ್ದಿ ಎಕ್ಸ್ಪ್ರೆಸ್ ರೈಲು ನಿಲುಗಡೆ ಮಾಡಲಾಗಿದ್ದು, ಇದನ್ನು ಜನರು ಸದುಪಯೋಗಪಡಿಸಿಕೊಳ್ಳಬೇಕೆಂದು ಸೋಮಣ್ಣ ತಿಳಿಸಿದರು.
ಅರಳಗುಪ್ಪೆ ಚಿಕ್ಕಮಂಗಳೂರು ಎಕ್ಸ್ಪ್ರೆಸ್ ರೈಲನ್ನು ಬರುವ ದಿನಗಳಲ್ಲಿ ನಿಲ್ಲಿಸಲಾಗುವುದು ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರವಿ ಹೆಬ್ಬಾಕ, ತುಮಕೂರು ಶಾಸಕ ಜ್ಯೋತಿ ಗಣೇಶ್, ಮಾಜಿ ಶಾಸಕ ಮಸಾಲೆ ಜಯರಾಮ್, ಬಿಜೆಪಿ ಮುಖಂಡ ಲೋಕೇಶ್ವರ್ ಹಾಗೂ ಅನೇಕ ರೈಲು ಅಧಿಕಾರಿಗಳು ತಿಪಟೂರಿನಗರಸಭಾ ಸದಸ್ಯರುಗಳು ಹಲವಾರು ಅಭಿಮಾನಿಗಳು ಭಾಗವಹಿಸಿದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q