ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇದೀಗ ಮಲೆನಾಡಿನ ಜಿಲ್ಲೆ ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ನಗರದ ಅಲ್ಲಮಪ್ರಭು ಮೈದಾನದಲ್ಲಿ ಆಯೋಜಿಸಿರುವ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮೋದಿ ಭಾಷಣ ಮಾಡಿದ್ದಾರೆ.
ಇದೇ ಸಂದರ್ಭ ಸಿಎಂ ಸಿದ್ದರಾಮಯ್ಯ ಅವರು, ರೈತರ ಸಾವಿಗೆ ಕಾರಣರಾದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಮಗ ಬಿವೈ ವಿಜಯೇಂದ್ರ ಅವರಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಸಿದ್ದರಾಮಯ್ಯ, ರೈತರ ಚಳವಳಿಗಳ ತವರುನೆಲ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ. ಬಿಎಸ್ ಯಡಿಯೂರಪ್ಪ ಅವರು ಹಿಂದೊಮ್ಮೆ ರೈತರ ಸಾಲ ಮನ್ನಾದ ಭರವಸೆ ನೀಡಿ ನಂತರ ಮುಖ್ಯಮಂತ್ರಿಯಾದ ಮೇಲೆ ನಮ್ಮ ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಲ್ಲ ಎಂದು ಹೇಳಿದ್ದರು. ಹಾವೇರಿಯಲ್ಲಿ ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್ ಮಾಡಿಸಿ ಅಮಾಯಕ ರೈತರನ್ನು ಬಲಿ ಪಡೆದಿದ್ದರು. ಇಂದು ಅದೇ ಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ? ರೈತರು ಮೋದಿ ಪರಿವಾರದ ಭಾಗವಲ್ಲವೇ ಎಂದು ಪ್ರಶ್ನಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


