ಶ್ರೀನಗರ: ಉತ್ತರ ಕಾಶ್ಮೀರದ ಸೋಪೋರ್ ಪ್ರದೇಶದ ಚೆಕ್ ಮೊಹಲ್ಲಾ ನೌಪೋರಾದಲ್ಲಿ ಗುರುವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್ ಕೌಂಟರ್ ಪ್ರಾರಂಭಗೊಂಡು, ಶುಕ್ರವಾರ ಮುಂಜಾನೆಯೂ ಗುಂಡಿನ ದಾಳಿ ಮುಂದುವರೆದಿದೆ. ಇದುವರೆಗೆ ಇಬ್ಬರು ಉಗ್ರರು ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎನ್ ಕೌಂಟರ್ ನಲ್ಲಿ ಗಾಯಗೊಂಡ ಇಬ್ಬರು ಸೇನಾ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಎನ್ಕೌಂಟರ್ನಲ್ಲಿ ಸಮೀಪದ ನಾಗರಿಕರೊಬ್ಬರು ಗಾಯಗೊಂಡಿದ್ದಾರೆ. ಎನ್ ಕೌಂಟರ್ ನಡೆದ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296