ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿದ್ದರಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೇನಾಯಕನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ತೋವಿನಕೆರೆ ಇವರ ಸಂಯುಕ್ತಶ್ರಯದಲ್ಲಿ ಆರೋಗ್ಯ ಮತ್ತು ಕ್ಷೇಮ ದಿನ ಹಾಗೂ ಯೋಗ ದಿನಾಚರಣೆಯನ್ನ ಆಚರಿಸಲಾಯಿತು.
ಈ ಸಂದರ್ಭದಲ್ಲಿ ತೋವಿನಕೆರೆಯ ಪ್ರಾಥಮಿಕ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ದಿನೇಶ್ ಮಾತನಾಡಿ, ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಸೇವೆಗಳ ಸೌಲಭ್ಯ ಮತ್ತು ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಮತ್ತು ಅ ಆಯುಷ್ಮನ್ ಭಾರತ್ ಆರೋಗ್ಯ ಕರ್ನಾಟಕದ ಬಗ್ಗೆ ಗ್ರಾಮಸ್ಥರಿಗೆ ಅರಿವು ಮೂಡಿಸಿದರು.
ನಂತರ ಮಾತನಾಡಿದ ಆರೋಗ್ಯ ರಕ್ಷಕಿ ಕವಿತಾ ಆರೋಗ್ಯ ಮತ್ತು ಕ್ಷೇಮ ಕೇಂದ್ರವು ಗ್ರಾಮದ ಜನರ ಆರೋಗ್ಯದ ಬಗ್ಗೆ ಕರ್ತವ್ಯ ನಿರ್ವಹಿಸುತ್ತದೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗುವುದು ಆದ್ದರಿಂದ ಗ್ರಾಮದ ಎಲ್ಲರೂ ಈ ಒಂದು ಅವಕಾಶವನ್ನ ಪಡೆದುಕೊಂಡು ಆರೋಗ್ಯವಾಗಿರಿ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಅರೋಗ್ಯ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀನಿವಾಸ್, ಪ್ರೇಮಕುಮಾರ್,ಅಂಗನವಾಡಿ ಕಾರ್ಯಕರ್ತೆ ಐಶ್ವರ್ಯ,ಆಶಾ ಕಾರ್ಯಕರ್ತೆ ಸಿದ್ದಗಂಗಮ್ಮ,ಶೈಲಜ, ಶಶಿಕಲಾ,ಮುದ್ದರಂಗಯ್ಯ, ರಾಧ, ಚಿಕ್ಕಣ್ಣ,ಹಾಗೂ ಗ್ರಾಮಸ್ಥರು,ಹಿರಿಯ ಮುಖಂಡರು ಉಪಸ್ಥಿತರಿದ್ದರು .
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5