nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026
    Facebook Twitter Instagram
    ಟ್ರೆಂಡಿಂಗ್
    • ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು
    • ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    • ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
    • ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಗುಂಪುಗಾರಿಕೆ ನಿಲ್ಲಿಸಿ | ದೊಡ್ಡಘಟ್ಟ ಚಂದ್ರೇಶ್ ಗೆ ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ
    • ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ
    • ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
    • ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಾಸ್ಟೆಲ್ ಗೇಟ್ ಹಾರಿ ವಿದ್ಯಾರ್ಥಿನಿ ತೆರಳಿದ ಪ್ರಕರಣ: ಆರೋಪಿಗಳ ರಕ್ಷಣೆ ಮುಂದಾದರೆ ಹೋರಾಟದ ಎಚ್ಚರಿಕೆ ನೀಡಿದ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ
    ತುಮಕೂರು July 24, 2023

    ಹಾಸ್ಟೆಲ್ ಗೇಟ್ ಹಾರಿ ವಿದ್ಯಾರ್ಥಿನಿ ತೆರಳಿದ ಪ್ರಕರಣ: ಆರೋಪಿಗಳ ರಕ್ಷಣೆ ಮುಂದಾದರೆ ಹೋರಾಟದ ಎಚ್ಚರಿಕೆ ನೀಡಿದ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ

    By adminJuly 24, 2023No Comments2 Mins Read
    koratagere

    ತುಮಕೂರು: ಜಿಲ್ಲಾ ವ್ಯಾಪ್ತಿಯ ಕೊರಟಗೆರೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ನಡೆಯುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯದಲ್ಲಿನ ವಿದ್ಯಾರ್ಥಿನಿಯರಿಗೆ ಕನಿಷ್ಠ ರಕ್ಷಣೆ ಒದಗಿಸದೆ ಇರುವುದನ್ನು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ತುಮಕೂರು ಜಿಲ್ಲಾ ಘಟಕ ಖಂಡಿಸಿದೆ.

    ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ ಗೇಟ್ ಹಾರಿ ಕಾರೊಂದರಲ್ಲಿ ಹೋಗಿರುವ ಘಟನೆಗೆ ಸಂಬಂಧಿಸಿದಂತೆ ಆಟೋ ಚಾಲಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಾಡಿರುವುದು ಆ ಬಡ ಹೆಣ್ಣುಮಕ್ಕಳನ್ನು ನಿಮ್ಮ ವ್ಯಾಪ್ತಿಯಲ್ಲಿ ಬರುವ ವಿದ್ಯಾರ್ಥಿನಿ ನಿಲಯದಲ್ಲಿ ನಿಮ್ಮನ್ನು ಮತ್ತು ಇಲಾಖೆಯನ್ನು ನಂಬಿ ಬಿಟ್ಟಿರುವ ಪೋಷಕರಿಗೆ ಅಲ್ಪವಾದರೂ ಸಮಾಧಾನ ತಂದು ಕೊಟ್ಟಿದ್ದರೂ  ಸಹ ನಿಮ್ಮ ಇಲಾಖೆಯ ಮೇಲೆ ನಂಬಿಕೆ ಕಡಿಮೆ ಆಗಿದೆ ಎಂದಿದೆ.


    Provided by
    Provided by

    ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯೋರ್ವಳು ರಾತ್ರಿ 11 ಗಂಟೆಗೆ ಕಾಂಪೌಂಡ್ ಗೋಡೆ ಹಾರಿ ಯಾವುದೋ ಕಾರಿನಲ್ಲಿ ಹೊರಗೆ ಹೋಗಿ ನಂತರ ಬೆಳಗಿನ ಜಾವ 5 ಗಂಟೆಗೆ ಅದೇ ಕಾಂಪೌಂಡ್ ಹಾರಿ ಬಂದಿರುವುದು ಪತ್ರಿಕೆಗಳಲ್ಲಿ ಪ್ರಕಟವಾಗಿದೆ.  ವಿಪರ್ಯಾಸವೆಂದರೆ  ಸಾಮಾಜಿಕ ಜಾಲತಾಣದಲ್ಲಿನ ವಿಡಿಯೋದಲ್ಲಿರುವಂತೆ ಕಾರಿನಲ್ಲಿ ಸದರಿ ವಿದ್ಯಾರ್ಥಿ ನಿಲಯದಲ್ಲಿನ ವಿದ್ಯಾರ್ಥಿನಿ ಹೋಗುತ್ತಿರುವುದು  ಸ್ಪಷ್ಟವಾಗಿ ತಿಳಿದರೂ ಸಹ ಪೊಲೀಸ್ ದೂರಿನಲ್ಲಿ ಆಟೋ ಚಾಲಕನ  ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿರುತ್ತದೆ. ಆದರೆ ಸದರಿ ವಿದ್ಯಾರ್ಥಿನಿಯನ್ನು ಕರೆದೊಯ್ದ ಕಾರಿನ ಮಾಲೀಕ ಮತ್ತು ಚಾಲಕನ ವಿರುದ್ಧ ದೂರು ದಾಖಲಿಸದ ಮರ್ಮವೇನು ? ಎಂಬುದು ಇನ್ನು ಯಕ್ಷ ಪ್ರಶ್ನೆಯಾಗಿಯೇ ಉಳಿದಿದ್ದು ಇಲಾಖೆ ಯಾರನ್ನೋ ರಕ್ಷಿಸುವ ಕೆಲಸ ಮಾಡುತ್ತಿರುವಂತೆ  ಗೋಚರವಾಗುತ್ತಿದೆ, ಒಂದು ವೇಳೆ ನಿಲಯಪಾಲಕರೇ ಈ ಕೃತ್ಯದಲ್ಲಿ ಏತಕ್ಕೆ ಭಾಗಿಯಾಗಿರಬಾರದು ? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಇದು ನಿಮ್ಮ ಇಲಾಖೆಗೆ ಒಂದು ಕಪ್ಪು ಚುಕ್ಕೆಯಾಗಿರುತ್ತದೆ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಶಂಕೆ ವ್ಯಕ್ತಪಡಿಸಿದೆ.

    ಸದರಿ ಪ್ರಕರಣದಲ್ಲಿ ತಾವುಗಳೇ ಸದರಿ ನಿಲಯದ ಪಾಲಕರ ಮೇಲೆ ಏಕೆ ಇದುವರೆವಿಗೂ ಇಲಾಖಾ ಶಿಸ್ತುಕ್ರಮ ತೆಗೆದುಕೊಂಡಿಲ್ಲ? ಕೇವಲ ಕಣ್ಣೊರೆಸುವ ಸಲುವಾಗಿ ನೋಟೀಸ್ ನೀಡಿರುವುದನ್ನು ಗಮನಿಸಿದರೆ ಸದರಿ ಕೃತ್ಯಕ್ಕೆ ಸಹಕರಿಸಿರುವ ಆರೋಪಿತರನ್ನು ರಕ್ಷಿಸಿರುವಂತೆ ಮೇಲ್ನೋಟಕ್ಕೆ ಕಂಡುಬರುತ್ತದೆ. ಆದ್ದರಿಂದ ತಾವುಗಳು ಕೂಡಲೇ ಸದರಿ ನಿಲಯ ಪಾಲಕರನ್ನು ಸೇರಿದಂತೆ ಅಲ್ಲಿನ ಕಾವಲುಗಾರರ ವಿರುದ್ಧ ಈಗಾಗಲೇ ದಾಖಲಾಗಿರುವ ದೂರಿನಲ್ಲಿ ಅವರನ್ನು ಆರೋಪಿತರನ್ನಾಗಿ ಮಾಡಿ ಆ ಕಾರಿನ ಚಾಲಕ ಮತ್ತು ಆ ಕಾರು ಯಾರದು ಎಂಬುದರ ಬಗ್ಗೆಯೂ ತನಿಖೆ ಮಾಡುವಂತೆ ಇಲಾಖೆ ವತಿಯಿಂದ ಪೊಲೀಸರಿಗೆ ದೂರು  ಕೊಟ್ಟು  ಮುಂದೆ ಇಂತಹ ಕೃತ್ಯಗಳು ತಮ್ಮ ಇಲಾಖಾ ವ್ಯಾಪ್ತಿಯ ವಿದ್ಯಾರ್ಥಿನಿಲಯಗಳಲ್ಲಿ  ನಡೆಯದಂತೆ ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಂಡು ಅಮಾಯಕ ಹೆಣ್ಣು ಮಕ್ಕಳನ್ನು ರಕ್ಷಿಸುವ ಹೊಣೆಗಾರಿಕೆ ಹೊರಬೇಕಾಗಿದೆ ಎಂದು ಒತ್ತಾಯಿಸಿದೆ.

    ಒಂದು ವೇಳೆ ತಾವುಗಳು ಈ ಮನವಿ ಪತ್ರ ತಲುಪಿದ 15 ದಿನದೊಳಗೆ ಸದರಿ ನಿಲಯಪಾಲಕರು ಮತ್ತು ಅಲ್ಲಿನ ಕಾವಲು ಸಿಬ್ಬಂದಿಯನ್ನು ಅಮಾನತಿನಲ್ಲಿಟ್ಟು ಅವರ ವಿರುದ್ಧ ಪೊಲೀಸ್ ದೂರನ್ನು ದಾಖಲಿಸಲು ಪೊಲೀಸರಿಗೆ ದೂರನ್ನು ಕೊಡದೆ ಇದ್ದ ಪಕ್ಷದಲ್ಲಿ ನಿಮ್ಮ ವಿರುದ್ಧವೂ ಸೇರಿದಂತೆ ಸಂಬಂಧ ಪಟ್ಟ ಸಕ್ಷಮ ಪ್ರಾಧಿಕಾರಕ್ಕೆ ದೂರು ನೀಡುವುದರ ಮೂಲಕ  ಈ ನೊಂದ ಅಮಾಯಕ ಹೆಣ್ಣು ಮಕ್ಕಳಿಗೆ ನ್ಯಾಯ ಸಿಗುವವರೆಗೂ ಹೋರಾಟ ಮಾಡಲಾಗುವುದೆಂದು ತಮ್ಮ ಗಮನಕ್ಕೆ ತರಬಯಸುತ್ತಿದ್ದೇವೆ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಎಚ್ಚರಿಸಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಕುಣಿಗಲ್: ನನ್ನ ಗಂಡ ನನ್ನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ, ತಲೆ ಬುರುಡೆಗೆ ಗಾಯವಾಗಿ ವೈದ್ಯರು ನಾಲ್ಕು ಹೊಲಿಗೆ ಹಾಕಿದ್ದಾರೆ,…

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026

    ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.