ಬೆಂಗಳೂರು: ನಗರದಲ್ಲಿ ಮಹಿಳೆಯರ ಸರಗಳವು ಮಾಡಿ ಪರಾರಿಯಾಗಿ ಉಡುಪಿಯಲ್ಲಿ ಸೆರೆಸಿಕ್ಕಿದ್ದ ಇಬ್ಬರು ಆರೋಪಿಗಳನ್ನು ಮಲ್ಲೇಶ್ವರ ಠಾಣೆ ಪೊಲೀಸರು ಕಸ್ಟಡಿಗೆ ಪಡೆದಿದ್ದು, ಇವರಿಂದ 7 3 ಲಕ್ಷ ಮೌಲ್ಯದ 49 ಗ್ರಾಂ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.
ಮೊಹಮ್ಮದ್ ರಫೀಕ್ ಹಾಗೂ ತೌಫಿಕ್ ಸಾಧಿಕ್ ಬಂಧಿತರು. ಅಪರಾಧ ಹಿನ್ನೆಲೆಯುಳ್ಳ ಇವರಿಬ್ಬರು, ಬೆಂಗಳೂರು, ಮಂಗಳೂರು, ಉಡುಪಿ ಹಾಗೂ ಶಿವಮೊಗ್ಗದಲ್ಲಿ ಮಹಿಳೆಯರ ಸರಗಳವು ಮಾಡಿದ್ದರು.
ಇತ್ತೀಚೆಗಷ್ಟೇ ಇವರನ್ನು ಉಡುಪಿ ಪೊಲೀಸರು ಬಂಧಿಸಿದ್ದರು. ಬಾಡಿ ವಾರಂಟ್ ಮೂಲಕ ಆರೋಪಿಗಳನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದಾಗ, ಕೆಲ ಪ್ರಕರಣಗಳು ಪತ್ತೆಯಾಗಿವೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಮಲ್ಲೇಶ್ವರ ಠಾಣೆ ವ್ಯಾಪ್ತಿಯ ನಿವಾಸಿ ಶಾಂತಮ್ಮ (70) ಅವರು ಮೇ 27ರಂದು ರಸ್ತೆಯಲ್ಲಿ ನಡೆದುಕೊಂಡು ಹೊರಟಿದ್ದರು. ಬೈಕ್ ನಲ್ಲಿ ಬಂದಿದ್ದ ಆರೋಪಿಗಳು, ಶಾಂತಮ್ಮ ಅವರನ್ನು ಹಿಂಬಾಲಿಸಿ ಚಿನ್ನದ ಸರ ಕಿತ್ತೊಯ್ದಿದ್ದರು. ಈ ಸಂಬಂಧ ದಾಖಲಾದ ಪ್ರಕರಣದ ತನಿಖೆ ಕೈಗೊಂಡಾಗ ಆರೋಪಿಗಳ ಸುಳಿವು ಸಿಕ್ಕಿತ್ತು’ ಎಂದು ಮೂಲಗಳು ತಿಳಿಸಿವೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


