ಪೂರ್ವ ಮಿಡ್ನಾಪುರದಲ್ಲಿ ಪತ್ನಿಯ ಶಿರಚ್ಛೇದಮಾಡಿ ಶಿರವನ್ನು ಕೈಯಲ್ಲಿ ಹಿಡಿದುಕೊಂಡು ತಿರುಗಾಡಿದ ಘಟನೆ ಪಶ್ಚಿಮ ಬಂಗಾಳದಲ್ಲಿನಡೆದಿದೆ. ಆರೋಪಿಯನ್ನು 40 ವರ್ಷದ ವ್ಯಕ್ತಿಯನ್ನು ಗೌತಮ್ ಗುಚ್ಚೈತ್ (40) ಎಂದು ಗುರುತಿಸಲಾಗಿದೆ.
ಗೌತಮ್ ತನ್ನ ಪತ್ನಿಯನ್ನು ಕೊಲೆ ಮಾಡಿದ ಬಳಿಕ ರಸ್ತಸಿಕ್ತ ಬಟ್ಟೆಯಲೇ ಚಿಸ್ತಿಪುರ ಬಸ್ ನಿಲ್ದಾಣದ ಬಳಿ ತಿರುಗಾಡಿದ್ದಾನೆ. ಜೊತೆಗೆ ಆತನ ಕೈಯಲ್ಲಿ ಪತ್ನಿಯ ರುಂಡ ಇರುವುದನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರ ಪ್ರಕಾರ, ಆರೋಪಿಯು ಮಾನಸಿಕ ಅಸ್ವಸ್ಥನಾಗಿದ್ದು ದಂಪತಿಗಳ ನಡುವೆ ಆಗಾಗ ಜಗಳ ನಡೆಯುತ್ತಿದ್ದುಈ ಹಿನ್ನೆಲೆಯಲ್ಲಿ ಆರೋಪಿಯು ಪತ್ನಿಯ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಶೋಧ ನಡೆಸಲಾಗಿದ್ದು, ಪತ್ನಿಯ ಮೃತದೇಹ ಪತ್ತೆಯಾಗಿದೆ. ಸದ್ಯ ಆರೋಪಿಯನ್ನು ಬಂಧಿಸಲಾಗಿದ್ದು,ಪ್ರಕರಣದ ತನಿಖೆ ನಡೆಯುತ್ತಿದೆ.


