ಬೆಂಗಳೂರು: ಕಲಾಸಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ವಾಹನ ಕಳವು ಪ್ರಕರಣದ ಆರೋಪಿಯನ್ನು ಬಂಧಿಸಿರುವ ಪೊಲೀಸರು, 37 ಲಕ್ಷ ಮೌಲ್ಯದ ವಾಹನಗಳನ್ನು ಜಪ್ತಿ ಪಡಿಸಿಕೊಂಡಿದ್ದಾರೆ. ಈತನಿಂದ ಆಟೊ ರಿಕ್ಷಾ ಹಾಗೂ 9 ದ್ವಿಚಕ್ರ ವಾಹನಗಳನ್ನು ಜಪ್ತಿಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.
ಇದೇ ಆರೋಪಿ ವಿರುದ್ಧ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಎರಡು, ಮಹದೇವಪುರ, ತಿಲಕನಗರ, ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದವು. ರಸ್ತೆಯ ಬದಿಯಲ್ಲಿ ನಿಲುಗಡೆ ಮಾಡಿದ್ದ ಬೈಕ್ ಹಾಗೂ ಆಟೊಗಳನ್ನು ನಕಲಿ ಕೀ ಬಳಸಿ ಕಳವು ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


