ಬೆಂಗಳೂರಿನ ಕುಖ್ಯಾತ ರೌಡಿ ಕಾಡುಬೀಸನಹಳ್ಳಿ ಸೋಮನ ಕಾರು ಚಾಲಕನ ಹತ್ಯೆ ಹಾಗು ರಾಜಾನುಕುಂಟೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣಗಳಲ್ಲಿ ಪೊಲೀಸರಿಗೆ ಸಿಗದೆ ಮೃತಪಟ್ಟಿರುವುದಾಗಿ ಬಿಂಬಿಸಿಕೊಂಡು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿಯನ್ನು ಸಿಸಿಬಿ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಮಲ್ಲಿಕಾರ್ಜುನ ಅಲಿಯಾಸ್ ಮಲ್ಲಿ ಬಂಧಿತ ಆರೋಪಿ.
ಮಲ್ಲಿಕಾರ್ಜುನ ಮೃತಪಟ್ಟಿರುವ ದಾಖಲೆಗಳನ್ನು ಕುಟುಂಬಸ್ಥರು ತೋರಿಸಿದ್ದರು. ಅದರೂ ಸಹ ಅನುಮಾನಗೊಂಡ ಸಿಸಿಬಿ ಪೊಲೀಸರು ತಲಾಶ್ ನಡೆಸಿ ಬಂಧಿಸಿದ್ದಾರೆ.


