30 ಲಕ್ಷ ಸಾಲ ವಾಪಸ್ ನೀಡಲು ಸತಾಯಿಸುತ್ತಿದ್ದ ಕಾರಣಕ್ಕೆ ವ್ಯಕ್ತಿಗಳಿಬ್ಬರನ್ನು ಅಪಹರಿಸಿ ಅಕ್ರಮ ಬಂಧನದಲ್ಲಿಟ್ಟಿದ್ದ ಏಳು ಮಂದಿ ಆರೋಪಿಗಳನ್ನು ಎಚ್. ಎಸ್. ಆರ್ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯ ನಿವಾಸಿಗಳಾದ ನಂದನ್ ಹಾಗೂ ಕಾರ್ತಿಕ್ ಅವರನ್ನು ಶುಕ್ರವಾರ ರಾತ್ರಿ ಅಪಹರಣ ಮಾಡಲಾಗಿತ್ತು.
ಇದರ ವಿಡಿಯೊವನ್ನು ಸಾರ್ವಜನಿಕರೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಹರಿಬಿಟ್ಟಿದ್ದರು. ತ್ವರಿತ ಕಾರ್ಯಾಚರಣೆ ನಡೆಸಿ ಕೆಲವೇ ಗಂಟೆಗಳಲ್ಲಿ ಇಬ್ಬರನ್ನೂ ರಕ್ಷಿಸಲಾಗಿದೆ. ಆರೋಪಿ ಮಧುಸೂದನ್ ಸೇರಿ ಏಳು ಮಂದಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
ದೂರುದಾರ ಹಾಗೂ ಆರೋಪಿಗಳ ನಡುವೆ ಹಣಕಾಸು ವ್ಯವಹಾರವಿತ್ತು. 30 ಲಕ್ಷ ಸಾಲ ಪಡೆದಿದ್ದ ದೂರುದಾರ, ವಾಪಸು ಕೊಟ್ಟಿರಲಿಲ್ಲ. ಇದೇ ಕಾರಣಕ್ಕೆ ಶುಕ್ರವಾರ ರಾತ್ರಿ ಸಂಧಾನ ನಡೆದಿತ್ತು. ಹಣ ಸಿಗದಿದ್ದಾಗ ಆರೋಪಿಗಳು, ದೂರುದಾರ ಹಾಗೂ ಆತನ ಸ್ನೇಹಿತನ್ನು ಅಪಹರಿಸಿದ್ದರು ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


