ಥಾಣೆ: ಬಾಲಕಿಯರಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸಿದ ಆರೋಪದ ಮೇಲೆ ಶಿಕ್ಷಕನನ್ನು ಬಂಧಿಸಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯಲ್ಲಿರುವ ಮಹಾನಗರ ಪಾಲಿಕೆಯ ಶಾಲೆಯೊಂದರಲ್ಲಿ ನಡೆದಿದೆ.
ಮುಝಮ್ಮಿಲ್ ಬಂಧಿತ ಆರೋಪಿಯಾಗಿದ್ದಾನೆ. ಈತನನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ ಅಂತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶಿಕ್ಷಕ ತನ್ನ ಮೊಬೈಲ್ ಫೋನ್‌ನಲ್ಲಿ ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸಿದ್ದು, ಈ ವಿಚಾರವನ್ನು ಬಾಲಕಿಯೊಬ್ಬಳು ತನ್ನ ಪೋಷಕರಿಗೆ ತಿಳಿಸಿದ್ದಳು. ಹೀಗಾಗಿ ಘಟನೆ ಬೆಳಕಿಗೆ ಬಂದಿತ್ತು.
7ನೇ ತರಗತಿಯ ಬಾಲಕಿಗೆ ಶಿಕ್ಷಕ ಅಶ್ಲೀಲ ಚಿತ್ರ ತೋರಿಸಿ ಕಿರುಕುಳ ನೀಡಿದ್ದಾನೆ. ಬಾಲಕಿ ಪ್ರತಿನಿತ್ಯವೂ ಶಾಲೆಗೆ ತಡವಾಗಿ ಬರುತ್ತಿದ್ದಳು. ಹೀಗಾಗಿ ಮುಖ್ಯಶಿಕ್ಷಕರು ಬಾಲಕಿಯ ಪೋಷಕರಿಗೆ ಕರೆ ಮಾಡಿ ವಿಚಾರಿಸಿದ್ದಾರೆ. ಈ ಬಗ್ಗೆ ಬಾಲಕಿಯ ಬಳಿ ಪೋಷಕರು ವಿಚಾರಿಸಿದಾಗ. ಶಿಕ್ಷಕ ತನಗೆ ಅಶ್ಲೀಲ ಚಿತ್ರ ತೋರಿಸಿ, ಅನುಚಿತವಾಗಿ ವರ್ತಿಸುತ್ತಿದ್ದಾರೆ. ಇದರಿಂದಾಗಿ ಶಾಲೆಗೆ ಹೋಗಲು ಮನಸ್ಸಿಲ್ಲ ಎಂದು ಹೇಳಿಕೊಂಡಿದ್ದಾಳೆ.
ತಕ್ಷಣವೇ ಎಚ್ಚೆತ್ತ ಬಾಲಕಿಯ ಪೋಷಕರು ಶಿಕ್ಷಕನ ವಿರುದ್ಧ ದೂರು ದಾಖಲಿಸಿದ್ದಾರೆ. ಸದ್ಯ ಬಾಲಕಿಯ ದೂರಿನಾಧಾರದ ಮೇಲೆ ಆರೋಪಿಯ ಮೇಲೆ ಎಫ್ ಐಆರ್ ದಾಖಲಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q