ಬೆಂಗಳೂರು: ಹ್ಯಾಂಡಲ್ ಲಾಕ್ ಮುರಿದು ದ್ವಿಚಕ್ರ ವಾಹನ ಕಳವು ಹಾಗೂ ಸಾರ್ವಜನಿಕರ ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದ ಆರೋಪಿಯನ್ನು ವಿಲ್ಸನ್ ಗಾರ್ಡನ್ ಪೊಲೀಸರು ಬಂಧಿಸಿದ್ದಾರೆ. ನಾಯಂಡಹಳ್ಳಿ ನಿವಾಸಿ ವಾಹೀದ್ ಖಾನ್(25) ಬಂಧಿತ ಆರೋಪಿ.
ಆರೋಪಿಯಿಂದ 14.64 ಲಕ್ಷ ಮೌಲ್ಯದ ವಿವಿಧ ಕಂಪನಿಗಳ ಆರು ದ್ವಿಚಕ್ರ ವಾಹನಗಳು ಹಾಗೂ 10 ಮೊಬೈಲ್ ಜಪ್ತಿ ಮಾಡಲಾಗಿದೆ. ನಗರದ ವಿವಿಧೆಡೆ ಸುತ್ತಾಡಿ ಮನೆ ಎದುರು ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ರಾತ್ರಿ ವೇಳೆ ಹ್ಯಾಂಡಲ್ ಲಾಕ್ ಮುರಿದು ಕಳವು ಮಾಡಿ ಪರಾರಿಯಾಗುತ್ತಿದ್ದ.


