ರಾಮನಗರ: ತಾನು ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ಪತ್ನಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಯಬಿಟ್ಟಿದ್ದ ಸರ್ಕಾರಿ ಶಾಲೆಯ ಶಿಕ್ಷಕಿಯನ್ನು ರಾಮನಗರ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೈಸೂರು ತಾಲ್ಲೂಕಿನ ಇಲವಾಲದ ಪವಿತ್ರ ಬಂಧಿತ ಶಿಕ್ಷಕಿಯಾಗಿದ್ದಾರೆ. ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಪವಿತ್ರ ಕನಕಪುರ ತಾಲ್ಲೂಕಿನ ದೊಡ್ಡಆಲಹಳ್ಳಿ ಮೂಲದವರು. ಪತಿಯಿಂದ ವಿಚ್ಛೇದನ ಪಡೆದಿರುವ ಆಕೆ ಪ್ರತ್ಯೇಕವಾಗಿ ವಾಸವಾಗಿದ್ದರು. ಮಾನಸಿಕವಾಗಿಯೂ ಕುಗ್ಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ತನ್ನ ಚಿತ್ರಗಳನ್ನು ಎಡಿಟ್ ಮಾಡಿ ಸುರೇಶ್ ಚಿತ್ರದೊಂದಿಗೆ ಜೋಡಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಳು. ವಿಡಿಯೊ ಕೂಡ ಹರಿಬಿಟ್ಟಿದ್ದಳು. ಪವಿತ್ರ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಮೈಸೂರಿಗೆ ತೆರಳಿ ಬಂಧಿಸಲಾಯಿತು.
ಕೋರ್ಟ್ಗೆ ಹಾಜರುಪಡಿಸಿದ ಬಳಿಕ ನ್ಯಾಯಾಂಗ ಬಂಧನಕ್ಕೆ ನೀಡಲಾಯಿತು ಎಂದು ಮೂಲಗಳು ಹೇಳಿವೆ.
ಅಕ್ಕಪಕ್ಕದ ಮನೆಯವರ ಕಿರಿಕಿರಿ ಸಹಿಸಲಾರದೇ,ಅವರನ್ನು ಹೆದರಿಸಲು ಈ ರೀತಿಯಾಗಿ ಶಿಕ್ಷಕಿ ವಿಡಿಯೋ ಮಾಡಿ ಹರಿಯಬಿಟ್ಟಿರುವುದಾಗಿ ಹೇಳಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————