ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿ ಮನೆಯತ್ತ ಹೊರಟಿದ್ದ ರೌಡಿ ಮಹೇಶ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ‘ಸಿದ್ದಾಪುರ ಠಾಣೆಯ ರೌಡಿ ಪಟ್ಟಿಯಲ್ಲಿ ಹೆಸರಿದ್ದ ಮಹೇಶ್ ನನ್ನು ಹಳೇ ವೈಷಮ್ಯದಿಂದಾಗಿ ಕೊಲೆ ಮಾಡಿರುವುದು ಗೊತ್ತಾಗಿದೆ.
ಕೃತ್ಯ ಎಸಗಿದ್ದಾರೆ ಎನ್ನಲಾದ ರೌಡಿ ವಿಲ್ಸನ್ ಗಾರ್ಡನ್ ನಾಗ, ಈತನ ಸಹಚರ ಮೋಹನ್ ಅಲಿಯಾಸ್ ಡಬಲ್ ಮೀಟರ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ. ‘ಕೊಲೆ ಪ್ರಕರಣದಲ್ಲಿ ಮಹೇಶ್ ಜೈಲಿಗೆ ಹೋಗಿದ್ದ. ಜೈಲಿನಿಂದ ಹೊರಬಂದ ನಂತರ, ನಾಗ ಹಾಗೂ ಆತನ ಕಡೆಯವರನ್ನು ಹತ್ಯೆಗೆ ಸಂಚು ರೂಪಿಸುತ್ತಿದ್ದ. ಈ ಮಾಹಿತಿ ತಿಳಿದ ನಾಗ, ಜೈಲಿನಿಂದ ಹೊರಬರುತ್ತಿದ್ದಂತೆ ಮಹೇಶ್ ಹತ್ಯೆ ಮಾಡಿದ್ದಾನೆ’ ಎಂದು ತಿಳಿಸಿವೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


