ರಾಜ್ಯ ರಾಜಧಾನಿಯಲ್ಲಿ ಸರಗಳ್ಳತನ, ಮೊಬೈಲ್ ಕಳ್ಳತನ, ದರೋಡೆ ಸೇರಿದಂತೆ 40ಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಮಲ್ಲೇಶ್ವರಂ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೊಹಮ್ಮದ್ ರಫೀಕ್ ಹಾಗೂ ತೌಫೀಕ್ ಸಾಧಿಕ್ ಬಂಧಿತ ಆರೋಪಿಗಳು.
ಮೇ 27 ರಂದು ಬೈಕಿನಲ್ಲಿ ಬಂದ ಆರೋಪಿಗಳು ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಮ್ಮ ಎಂಬ 70 ವರ್ಷದ ವೃದ್ಧೆಯ ಚಿನ್ನದ ಮಾಂಗಲ್ಯ ಸರ ಕಸಿದುಕೊಂಡು ಪರಾರಿಯಾಗಿದ್ದರು. ಇನ್ನು ಈ ಬಗ್ಗೆ ಕುರಿತು ಮಾತನಾಡಿದ ಉತ್ತರ ವಿಭಾಗದ ಡಿಸಿಪಿ ಶಿವಪ್ರಕಾಶ್ ದೇವರಾಜು ಅವರು, ಮೇ 27ರಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಸರಗಳ್ಳತನವಾಗಿರುವ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಮಲ್ಲೇಶ್ವರಂ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದರು. ತನಿಖೆ ವೇಳೆ, ಆರೋಪಿಗಳಿಬ್ಬರು ಸರಗಳ್ಳತನ ಪ್ರಕರಣವೊಂದರಲ್ಲಿ ಉಡುಪಿ ಜಿಲ್ಲೆಯ ಕಾಪು ಠಾಣೆಯ ಪೊಲೀಸರಿಂದ ಬಂಧನವಾಗಿರುವುದನ್ನು ತಿಳಿದು ಬಾಡಿ ವಾರಂಟ್ ಮೂಲಕ ವಶಕ್ಕೆ ಪಡೆಯಲಾಗಿತ್ತು.
ಈ ವೇಳೆ ಬಂಧಿತರಿಂದ ಮೂರು ಲಕ್ಷ ರೂ ಮೌಲ್ಯದ ಒಟ್ಟು 49 ಗ್ರಾಂ ತೂಕದ ಚಿನ್ನದ ಗಟ್ಟಿಗಳನ್ನು ವಶಕ್ಕೆ ಪಡೆಯಲಾಗಿದೆ. ತನಿಖೆ ಸಂದರ್ಭದಲ್ಲಿ ಮೊಹಮ್ಮದ್ ರಫೀಕ್ ಹಾಗೂ ತೌಫೀಕ್ ಸಾಧಿಕ್ ಇಬ್ಬರು ಮಹಾಲಕ್ಷ್ಮಿ ಲೇಔಟ್ ಹಾಗೂ ಮಲ್ಲೇಶ್ವರಂನಲ್ಲಿ ಸರಗಳ್ಳತನ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿಗಳಾಗಿದ್ದರು. ಬಂಧಿತರ ವಿರುದ್ಧ ಬೆಂಗಳೂರು, ಮಂಗಳೂರು, ಉಡುಪಿ, ಶಿವಮೊಗ್ಗದ ಹಲವೆಡೆ ಪ್ರಕರಗಳು ದಾಖಲಾಗಿರುವುದು ಕಂಡು ಬಂದಿವೆ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/F93PYUrewdsCfgROQBejv5
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಮಾಡಿ: https://www.youtube.com/channel/UCtrQuDOToxHu8dzMaHjoYXA


