ಕೋಲಾರದಿಂದ ರಾತ್ರಿ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಬೆಂಗಳೂರಿಗೆ ಬಂದು ದ್ವಿಚಕ್ರ ವಾಹನ ಕಳವು ಮಾಡಿಕೊಂಡು ಪರಾರಿಯಾಗುತ್ತಿದ್ದ ಮೂವರು ಆರೋಪಿಗಳನ್ನು ಕಾಟನ್ ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೋಲಾರದ ಜಿಲ್ಲೆ ಮುಳಬಾಗಿಲು ತಾಲೂಕಿನ ನವಕ್ಕಲ್ ಬಂಡೆ ನಿವಾಸಿ ಮಹಮ್ಮದ್ ಆಸೀಫ್ (27), ಮಹಮ್ಮದ್ ವಾಸೀಂ(22) ಹಾಗೂ ಸೈಯದ್ ಆಸೀಫ್(25) ಬಂಧಿತರು. ಆರೋಪಿಗಳಿಂದ 122.30 ಲಕ್ಷ ಮೌಲ್ಯದ ವಿವಿಧ ಕಂಪನಿಗಳ 31 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ.


