ಖಾಸಗಿ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿದೇಶದಲ್ಲಿರುವುದರಿಂದ, ಅವರನ್ನು ಬಂಧಿಸಿ ಕರೆತರಲು ಕೇಂದ್ರ ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶ ಮಾಡಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಇದಕ್ಕೆ ಮಾಜಿ ಐಪಿಎಸ್ ಅಧಿಕಾರಿ, ತಮಿಳನಾಡು ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಅಣ್ಣಮಲೈ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕಾರ್ಯವಿಧಾನದ ಪ್ರಕಾರ, ಎಸ್ಐಟಿ ಅಥವಾ ಸಿಐಡಿ ಸಿಬಿಐಗೆ ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತದೆ. ವಿದೇಶಕ್ಕೆ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲು ಅಥವಾ ಇಂಟರ್ಪೋಲ್ ನೆರವು ಪಡೆಯಲು ರಾಜ್ಯ ಸರ್ಕಾರ ಸಿಬಿಐ ನಿರ್ದೇಶಕರಿಗೆ ಪತ್ರ ಬರೆಯಬೇಕು. ಬಳಿಕ ರೆಡ್ ಕಾರ್ನರ್ ಜಾರಿಗೊಳಿಸಲಾಗುತ್ತದೆ. ಆಗ ಆರೋಪಿ ಯಾವುದೇ ವಿಮಾನ ನಿಲ್ದಾಣಕ್ಕೆ ಬಂದರೆ ಕೂಡಲೆ ಅವನನ್ನು ಅಲ್ಲಿನ ಪೊಲೀಸರು ಬಂಧಿಸುತ್ತಾರೆ.
ಬಳಿಕ ಆರೋಪಿ ಬೇಕಾಗಿರುವ ಠಾಣೆಗೆ ಮಾಹಿತಿ ನೀಡುತ್ತಾರೆ. ನಾನು ಕರ್ನಾಟಕದ ಸೇವೆ ಸಲ್ಲಿಸುತ್ತಿರುವಾಗ ಭೂಗತ ಪಾತಕಿ ಬನ್ನಂಜೆ ರಾಜನನ್ನು ಮೊರಾಕೊದಿಂದ ಪ್ರಧಾನಿಗೆ ಯಾವುದೇ ಪತ್ರ ಬರೆಯದೆ ಬಂಧಿಸಿ ಕರೆತಂದೆವು ಎಂದರು. ದೇಶದ ಪೊಲೀಸ್ ಇತಿಹಾಸದಲ್ಲೇ ಇಂಟರ್ ಪೋಲ್ ಮೂಲಕ ಆರೋಪಿಯನ್ನು ಬಂದಿಸಿ ಕರೆತಂದಿದ್ದು ಕರ್ನಾಟಕ ಪೊಲೀಸ್. 2015ರಲ್ಲಿ ಡಿಜಿಪಿ ಪ್ರತಾಪ್ ರೆಡ್ಡಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು. ಇದು ಬಿಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆಯುತ್ತಾರೆ. ಇದು ಬರೀ ರಾಜಕೀಯ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296