ಬೆಂಗಳೂರು ನಗರದ ಹಲವು ಮನೆಗಳಲ್ಲಿ ಕಳ್ಳತನ ಮಾಡಿದ್ದ ಆರೋಪದಡಿ ಉತ್ತರ ಪ್ರದೇಶದ ನಾಲ್ವರು ಆರೋಪಿಗಳನ್ನು ಸಂಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಿಂತು ವಿಶ್ವಾಸ್, ಹರೀಶ್ ಚಂದ್ರ, ಜಸ್ವೀರ್ ಹಾಗೂ ಚಂದ್ರಬಾನು ಬಂಧಿತರು.
ಉತ್ತರ ಪ್ರದೇಶದಿಂದ ವಿಮಾನದಲ್ಲಿ ನಗರಕ್ಕೆ ಆಗಾಗ ಬರುತ್ತಿದ್ದ ಆರೋಪಿಗಳು, ಕಳ್ಳತನ ಮಾಡಿ ಪರಾರಿಯಾಗುತ್ತಿದ್ದರು. ನಾಲ್ವರನ್ನೂ ಬಂಧಿಸಿ 178 ಲಕ್ಷ ಮೌಲ್ಯದ 1 ಕೆ. ಜಿ 430 ಗ್ರಾಂ ಚಿನ್ನಾಭರಣ ಹಾಗೂ ವಜ್ರದ ಒಡವೆ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು. ‘ಆರೋಪಿಗಳು, ಕಳ್ಳತನವನ್ನೇ ವೃತ್ತಿ ಮಾಡಿಕೊಂಡಿದ್ದರು. ದೆಹಲಿ, ಕರ್ನಾಟಕ, ಕೇರಳ ಹಾಗೂ ರಾಜಸ್ಥಾನ್ ರಾಜ್ಯಗಳಲ್ಲಿ ಕೃತ್ಯ ಎಸಗಿರುವುದು ಗೊತ್ತಾಗಿದೆ’ ಎಂದರು.
ವಿಮಾನದಲ್ಲಿ ಸಂಚಾರ, ಲಾಡ್ಜ್ ನಲ್ಲಿ ವಾಸ್ತವ್ಯ: ಉತ್ತರ ಪ್ರದೇಶದಿಂದ ವಿಮಾನದಲ್ಲಿ ನಗರಕ್ಕೆ ಬರುತ್ತಿದ್ದ ಆರೋಪಿಗಳು, ಇಲ್ಲಿಯ ಲಾಡ್ಜ್ ಗಳಲ್ಲಿ ಉಳಿದುಕೊಳ್ಳುತ್ತಿದ್ದರು. ಆರಂಭದಲ್ಲಿ, ದ್ವಿಚಕ್ರ ವಾಹನ ಕದಿಯುತ್ತಿದ್ದರು. ಅದರಲ್ಲಿಯೇ ನಗರದ ಹಲವು ಪ್ರದೇಶಗಳಲ್ಲಿ ಸುತ್ತಾಡಿ ಮನೆಗಳನ್ನು ಗುರುತಿಸಿ ಕಳ್ಳತನಕ್ಕೆ ಸಂಚು ರೂಪಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದರು.
‘ಅಂಗಳದಲ್ಲಿ ಕಸ ಬಿದ್ದಿರುತ್ತಿದ್ದ, ರಂಗೋಲಿ ಹಾಕಿರದ ಹಾಗೂ ಬೀಗ ಹಾಕಿರುತ್ತಿದ್ದ ಮನೆಗಳನ್ನು ಆರೋಪಿಗಳು ಗುರುತಿಸುತ್ತಿದ್ದರು. ರಾತ್ರಿ ವೇಳೆ ಮನೆಗಳಿಗೆ ನುಗ್ಗಿ, ಚಿನ್ನಾಭರಣ ಹಾಗೂ ನಗದು ಕದ್ದುಕೊಂಡು ಪರಾರಿಯಾಗುತ್ತಿದ್ದರು’ ಎಂದರು.
ಗಡ್ಡ ನೀಡಿದ ಸುಳಿವು, ದೆಹಲಿಯಲ್ಲಿ ಬಂಧನ: ‘ಡಾಲರ್ಸ್ ಕಾಲೊನಿಯಲ್ಲಿರುವ ಸಾಫ್ಟ್‌ವೇರ್ ಎಂಜಿನಿಯರೊಬ್ಬರ ಮನೆಯೊಂದರಲ್ಲಿ ಇತ್ತೀಚೆಗೆ ಕಳ್ಳತನ ನಡೆದಿತ್ತು. ಈ ಬಗ್ಗೆ ದೂರು ದಾಖಲಾಗಿತ್ತು. ಸಿ. ಸಿ. ಟಿ. ವಿ ಕ್ಯಾಮೆರಾ ಪರಿಶೀಲಿಸಿದಾಗ, ಆರೋಪಿಯೊಬ್ಬನಿಗೆ ವಿಚಿತ್ರ ಶೈಲಿಯ ಗಡ್ಡವಿರುವುದು ಕಂಡಿತ್ತು’ ಎಂದು ಪೊಲೀಸರು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


