nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

    June 12, 2026

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026
    Facebook Twitter Instagram
    ಟ್ರೆಂಡಿಂಗ್
    • ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿತ್ರಕಲಾ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ಅಗತ್ಯವಿದೆ: ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಸಿ.ಸಿ.ಬಾರಕೇರ  ಅಭಿಮತ
    ತುಮಕೂರು November 23, 2023

    ಚಿತ್ರಕಲಾ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ಅಗತ್ಯವಿದೆ: ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಸಿ.ಸಿ.ಬಾರಕೇರ  ಅಭಿಮತ

    By adminNovember 23, 2023No Comments2 Mins Read

    ತುಮಕೂರು: ರಾಜ್ಯದಲ್ಲಿ ಸಾವಿರಾರು ವಿದ್ಯಾರ್ಥಿಗಳು ಚಿತ್ರಕಲಾ ಶಿಕ್ಷಣವನ್ನು ಕಲಿಯುತ್ತಿದ್ದು, ವಿಶೇಷವಾಗಿ ಚಿತ್ರಕಲಾ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹದ ಅಗತ್ಯವಿದೆ ಎಂದು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಸಿ.ಸಿ.ಬಾರಕೇರ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

    ನಗರದ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದಲ್ಲಿ ಮಂಗಳವಾರ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳು ಹಾಗೂ ಅತಿಥಿ ಉಪನ್ಯಾಸಕರಿಗೆ ಸ್ವಾಗತ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.


    Provided by
    Provided by

    ಗುರು-ಶಿಷ್ಯರ ಸಂಬಂಧ ತಂದೆ ಮಕ್ಕಳಂತೆ ಹಾಗೆಯೇ ಇಲ್ಲಿಯ ವಿದ್ಯಾರ್ಥಿಗಳು ಸಹೋದರರಂತೆ ಪ್ರೀತಿ ವಾತ್ಸಲ್ಯದ ವಾತಾವರಣವನ್ನು ಕಾಪಾಡಿಟ್ಟುಕೊಂಡು ಗುರುಗಳ ಮಾರ್ಗದರ್ಶನ ಪಡೆಯುವ ಮೂಲಕ ಉತ್ತಮ ಶಿಕ್ಷಣದ ಕಡೆಗೆ ಹೆಚ್ಚಿನ ಗಮನಹರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

    ನಮ್ಮ ಕಾಲೇಜಿಗೆ ಹಳೆ ವಿದ್ಯಾರ್ಥಿಗಳ ಸಂಘ ಸದಾ ಬೆಂಬಲವಾಗಿ ನಿಂತಿದೆ. ಆ ಸಂಘದ ಪ್ರತಿಯೊಬ್ಬ ಕಾರ್ಯಕರ್ತನೂ ಅವರ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಿರುವುದು ಖುಷಿಯ ಸಂಗತಿ. ಇಂದಿನ ವಿದ್ಯಾರ್ಥಿಗಳು ಕಾಲೇಜಿನ ಉಪಾನ್ಯಾಸಕರು ಹಾಗೂ ಹಳೆಯ ವಿದ್ಯಾರ್ಥಿಗಳ ಮಾರ್ಗದರ್ಶನ ಪಡೆದು ಸಮಾಜದಲ್ಲಿ ಒಬ್ಬ ಉತ್ತಮ ಚಿತ್ರಕಲಾವಿದರಾಗಬೇಕು ಎಂದರು.

    ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಕಲಾ ಶಿಕ್ಷಕ ಎಂ.ಎನ್.ಸುಬ್ರಮಣ್ಯ ಅವರು ಮಾತನಾಡಿ, ಇಲ್ಲಿ ಹಲವು ವಿದ್ಯಾರ್ಥಿಗಳು ಚಿತ್ರಕಲಾ ಶಿಕ್ಷಣಕ್ಕೆ ಪ್ರವೇಶ ಪಡೆದು ಅಷ್ಟೇ ವೇಗದಲ್ಲಿ ತರಗತಿಯಿಂದ ದೂರ ಉಳಿಯುವ ಪ್ರಸಂಗಗಳು ಹೆಚ್ಚು ನಡೆಯುತ್ತಿವೆ. ಯಾವುದೇ ಕ್ಷೇತ್ರವಾಗಿದ್ದರೂ ಆಸಕ್ತಿ ಬಹಳ ಮುಖ್ಯವಾಗಿರುತ್ತದೆ. ಎಲ್ಲಾ ಕ್ಷೇತ್ರಗಳು ತಮ್ಮದೇ ವ್ಯಾಪ್ತಿಯಲ್ಲಿ ಸಾಧನೆ ಗೈಯುತ್ತಿರುವುದನ್ನು ನೋಡುತ್ತಿದ್ದೇವೆ. ಚಿತ್ರಕಲಾ ಕ್ಷೇತ್ರವು ಇತರೆ ಕ್ಷೇತ್ರಗಳಿಗಿಂತ ತುಸು ಭಿನ್ನವಾಗಿದ್ದು ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಜನಮನ್ನಣೆ ಗಳಿಸಿದೆ ಎಂದು ಹೇಳಿದರು.

    ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಜಿ.ಎಲ್.ನಟರಾಜು ಮಾತನಾಡಿ, ನಾವು ಇದೇ ಕಾಲೇಜಿನಲ್ಲಿ ಕಲಿತಿದ್ದೇವೆ. ಕಾಲೇಜಿನ ಹಾಗೂ–ಹೋಗುಗಳಿಗೆ ಜೊತೆಯಾಗಿದ್ದೇವೆ. ಮುಂದೆಯೂ ನಿಮ್ಮಗಳ ಜೊತೆಯಲ್ಲಿ ಇರುತ್ತೇವೆ. ಉತ್ತಮ ಶಿಕ್ಷಣ ಕಲಿಯುವುದರತ್ತ ವಿದ್ಯಾರ್ಥಿಗಳು ಮುಂದಾಗಬೇಕು ಎಂದರು.

    ಹಳೆ ವಿದ್ಯಾರ್ಥಿಗಳ ಸಂಘದ ಖಜಾಂಚಿ ಮಹಮ್ಮದ್ ಗೌಸ್ಪೀರ್ ಮಾತನಾಡಿ, ಉತ್ತಮ ಕಲಾವಿದರಾಗಲು ಶ್ರಮ ಅತ್ಯಗತ್ಯ. ಕಾಲೇಜಿಗೆ ಸೇರುವುದು ಮುಖ್ಯವಲ್ಲ, ಸೇರಿದ ನಂತರ ತರಗತಿಗೆ ಗೈರಾಗದೆ ತಮ್ಮದೆ ಸೃಜನಶೀಲತೆಯ ಅನಾವರಣಗೊಳಿಸುವತ್ತ ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಕಿವಿಮಾತು ಹೇಳಿದರು.

    ಈ ಸಂದರ್ಭದಲ್ಲಿ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣಪತ್ರವನ್ನು ವಿತರಿಸಲಾಯಿತು.

    ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಾದ ಆರ್.ರಂಗಸ್ವಾಮಿ, ಸತ್ಯನಾರಾಯಣ ಟಿ.ಎಸ್, ಡಾ.ಸುರೇಂದ್ರನಾಥ್ ಡಿ.ಅರ್, ಡಾ.ಸಂತೋಷಕುಮಾರ ನಾಗರಾಳ, ಡಾ.ಶ್ವೇತ ಡಿ.ಎಸ್ ಹಾಗೂ ವಿದ್ಯಾರ್ಥಿಗಳು ಇದ್ದರು. ಸ್ವಾಗತವನ್ನು ಧನುಷ್, ಪಲ್ಲವಿ ವಂದನಾರ್ಪಣೆ ಹಾಗೂ ವಿದ್ಯಾಭಾಯಿ ಬಿ.ಎಚ್ ನಿರೂಪಣೆ ಮಾಡಿದರು.  ಕುಮಾರಿ ಶ್ರೀವಿದ್ಯಾ ಟಿ.ಎಸ್.‌ ಪ್ರಾರ್ಥನ ಗೀತೆ ಹಾಡಿದರು. ಶ್ರೀಮತಿ ವೆಂಕಟಲಕ್ಷ್ಮೀ ಹಾಜರಿದ್ದರು.

    admin
    • Website

    Related Posts

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

    June 12, 2026

    ಪಾವಗಡ: ಪಾವಗಡ ತಾಲ್ಲೂಕಿನ ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆಯನ್ನು ಮಂಜೂರು ಮಾಡಿಸಿರುವ  ಹೆಚ್.ವಿ.ವೆಂಕಟೇಶ್ ಅವರನ್ನು ಗ್ರಾಮದ ಮುಖಂಡರು ಹಾಗೂ ಶಾಲಾ…

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.